ರಾಜ್ಯ7-9ರವರೆಗೆ ಪರೀಕ್ಷೆ ಇಲ್ಲದೆ ನೇರ ಪಾಸ್; ಶೀಘ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ದಿನಾಂಕ ಪ್ರಕಟ: ಸುರೇಶ್ ಕುಮಾರ್
7ರಿಂದ 9ನೆ ತರಗತಿವರೆಗೆ ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಏಪ್ರಿಲ್ 14 ರ ನಂತರ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಸಲಾಗುತ್ತಿದ್ದು, ಆದಷ್ಟು ಬೇಗ ದಿನಾಂಕ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.