ರಾಜ್ಯಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ, ಈ ಬಾರಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ನೋಂದಣಿ!
ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಪರಿಗಣಿಸಲಾದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಇಂದಿನಿಂದ (ಮಾ.31) ಆರಂಭವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ನಡುವೆಯೂ ಏಪ್ರಿಲ್ 15 ರವರೆಗೂ ನಡೆಯಲಿರುವ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.