ದೇಶಮನೀಶ್ ಸಿಸೋಡಿಯಾ ಬಂಧನ: ಎಎಪಿ ಕೇಂದ್ರ ಕಚೇರಿ, ಸಿಬಿಐ ಕಚೇರಿಗೆ ಬಿಗಿ ಭದ್ರತೆ
ದೆಹಲಿ ಅಬಕಾರಿ ನೀತಿ ಹರಗಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ ನಂತರ ಎಎಪಿ ಕರೆ ನೀಡಿದ್ದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಸೋಮವಾರ ಬೆಳಗ್ಗೆ ಕೇಂದ್ರ ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯ ಹೊರಗೆ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.