AAP

ದೆಹಲಿ ನೀರಿನ ಬಿಕ್ಕಟ್ಟು: ಆರೋಗ್ಯ ಹದಗೆಟ್ಟು ಆಸ್ಪತ್ರೆ ಸೇರಿದ ಅತಿಶಿ, ಉಪವಾಸ ಸತ್ಯಾಗ್ರಹ ಅಂತ್ಯ!
ದೆಹಲಿಯ ಜನತೆಗೆ ನ್ಯಾಯಯುತವಾದ ನೀರು ಒದಗಿಸುವಂತೆ ಕಳೆದ 5 ದಿನಗಳಿಂದ ಜಲಸಚಿವ ಅತಿಶಿ ಉಪವಾಸ ನಡೆಸುತ್ತಿದ್ದಾರೆ ಎಂದು ಹೇಳಿದರು. ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಇಂದು ಅಂತ್ಯಗೊಂಡಿದೆ ಎಂದು ಸಂಜಯ್ ಸಿಂಗ್ ಹೇಳಿದರು.

ಹಲ್ಲೆ ಪ್ರಕರಣದ ಬಗ್ಗೆ ಚರ್ಚಿಸಲು ಸಮಯ ಕೋರಿ ಇಂಡಿಯಾ ಬ್ಲಾಕ್ ಗೆ ಸ್ವಾತಿ ಮಲಿವಾಲ್ ಪತ್ರ
ತಮ್ಮ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಕುರಿತು ಚರ್ಚಿಸಲು ಸಮಯ ಕೋರಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮಂಗಳವಾರ ಇಂಡಿಯಾ ಬ್ಲಾಕ್ ನಾಯಕರಿಗೆ ಪತ್ರ ಬರೆದಿದ್ದಾರೆ.

AAP ಗೆ ಮರ್ಮಾಘಾತ: ಪಂಜಾಬ್ನ 60 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಪ್ರಮಾಣ ಗಮನಾರ್ಹ ಕುಸಿತ!
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್ ನಲ್ಲಿ ಆಡಳಿತಾರೂಢ-ಎಎಪಿ ಗಮನಾರ್ಹ ಕುಸಿತ ಕಂಡಿದೆ. 2022ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದ 60 ವಿಧಾನಸಭಾ ಕ್ಷೇತ್ರಗಳಲ್ಲಿ ಪಂಜಾಬ್ಸೋತಿದೆ.

ಅರವಿಂದ್ ಕೇಜ್ರಿವಾಲ್ ಗೆ ಸಿಗದ ರಿಲೀಫ್: ಜೂನ್ 19ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!
ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನೀಡಲು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ನಿರಾಕರಿಸಿದೆ.

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ: ಎಎಪಿಯ ಸೋಮನಾಥ ಭಾರ್ತಿ
ಲೋಕಸಭೆ ಚುನಾವಣೆಗೆ ನಡೆದ ಮತದಾನ ನೆನ್ನೆಗೆ ಮುಕ್ತಾಯಗೊಂಡಿದ್ದು, ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತು ಎನ್ಡಿಎಗೆ ಸ್ಪಷ್ಟವಾದ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಎಎಪಿಯ ಸೋಮನಾಥ್ ಭಾರ್ತಿ ಸಮೀಕ್ಷೆಗಳನ್ನು ಅಲ್ಲಗಳೆದಿದ್ದು, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುವುದಿಲ್ಲ ಎಂದಿದ್ದಾರೆ.

ಜಾಮೀನು ಅರ್ಜಿ ವಿಚಾರಣೆ ತೀರ್ಪು ಜೂನ್ 5ಕ್ಕೆ ಮುಂದೂಡಿಕೆ: ನಾಳೆ ತಿಹಾರ್ ಜೈಲಿಗೆ ಅರವಿಂದ್ ಕೇಜ್ರಿವಾಲ್ ವಾಪಸ್!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ವಿಚಾರಣೆಯು ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಪೂರ್ಣಗೊಂಡಿದೆ. ಜೂನ್ 5ಕ್ಕೆ ಮಧ್ಯಂತರ ಜಾಮೀನು ಕುರಿತು ನ್ಯಾಯಾಲಯ ತೀರ್ಪು ನೀಡಲಿದ್ದು ಸದ್ಯಕ್ಕೆ ನಾಳೆ ಕೇಜ್ರಿವಾಲ್ ಶರಣಾಗಬೇಕಿದೆ.

ಸಿಇಟಿ ಫಲಿತಾಂಶ ವಿಳಂಬದಿಂದ 3 ಸಾವಿರ ಕೋಟಿ ರೂ. ಹಗರಣ: AAP ಆರೋಪ
ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು 3 ಸಾವಿರ ಕೋಟಿ ರೂ.ಗಳ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಆರೋಪಿಸಿದೆ.

ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಬಂಧನ ಪ್ರಶ್ನಿಸಿ ದೆಹಲಿ ಸಿಎಂ ಆಪ್ತ ಸಹಾಯಕ ಬಿಭವ್ ಕುಮಾರ್ ಹೈಕೋರ್ಟ್ ಗೆ ಅರ್ಜಿ
ಮೇ 13 ರಂದು ನಾನು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದಾಗ ಬಿಭವ್ ಕುಮಾರ್ ಅವರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.

ಯೂಟ್ಯೂಬರ್ ಧ್ರುವ್ ರಾಠೆ ವಿಡಿಯೋ ಬಳಿಕ ಅತ್ಯಾಚಾರ, ಜೀವ ಬೆದರಿಕೆಗಳು ಬರುತ್ತಿವೆ: ಸ್ವಾತಿ ಮಲಿವಾಲ್
ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಂದ ಚಾರಿತ್ರ್ಯ ವಧೆ ಅಭಿಯಾನದ ನಂತರ ತನಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ. ಯೂಟ್ಯೂಬರ್ ಧ್ರುವ್ ರಾಠೆ ಅವರು ತಮ್ಮ ವಿರುದ್ಧ ಏಕಪಕ್ಷೀಯವಾದ ವಿಡಿಯೋವನ್ನು ಪೋಸ್ಟ್ ಮಾಡಿದ ನಂತರ ಪರಿಸ್ಥಿತಿ ಉಲ್ಬಣಗೊಂಡಿದೆ ಎಂದು ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಭಾನುವಾರ ಹೇಳಿದ್ದಾರೆ.

