ದೇಶಅಧಿರ್ ರಂಜನ್ ಚೌಧರಿಯನ್ನು ಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ: ಸೋನಿಯಾಗೆ ಅಬ್ದುಲ್ ಮನ್ನನ್ ಆಗ್ರಹ
ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ(ಪಿಸಿಸಿ) ಅಧ್ಯಕ್ಷರಾಗಿ ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ನೇಮಕ ಮಾಡುವಂತೆ ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ಮನ್ನನ್ ಅವರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ.