Abhishek Banerjee

ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ರ‍್ಯಾಲಿ ನಡೆಸುತ್ತಿದ್ದ ಸ್ಥಳದಲ್ಲಿ ಸ್ಫೋಟ, ಇಬ್ಬರು ಸಾವು, ಹಲವರಿಗೆ ಗಾಯ
ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಟಿಎಂಸಿ ನಾಯಕ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ನಿಗದಿತ ರ‍್ಯಾಲಿಯ ಸ್ಥಳದ ಬಳಿ ನಡೆದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಲ್ಲಿದ್ದಲು ಕಳ್ಳಸಾಗಣೆ ಹಗರಣ: ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್
ಕಲ್ಲಿದ್ದಲು ಕಳ್ಳತನ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯರಾತ್ರಿ 12.30ಕ್ಕೆ ಇ.ಡಿ ಕಚೇರಿಗೆ ಬಂದ ಅಭಿಷೇಕ್ ಬ್ಯಾನರ್ಜಿ ಸೊಸೆ ಮನೇಕಾ ಗಂಭೀರ್; ಹೊಸ ಸಮನ್ಸ್ ನೀಡಿದ ಇ.ಡಿ!
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಸೊಸೆ ಮನೇಕಾ ಗಂಭೀರ್ ಅವರು ಸೋಮವಾರ 12.30ಕ್ಕೆ ಇ.ಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಅದರಂತೆ ಗಂಭೀರ್ ಅವರು ಮಧ್ಯರಾತ್ರಿಯ ಇ.ಡಿ ಕಚೇರಿಗೆ ಆಗಮಿಸಿದ್ದು, ಜಾರಿ ನಿರ್ದೇಶನಾಲಯದ ಕಣ್ಣು ಕೆಂಪಾಗಿಸಿದೆ.

ಅಮಿತ್ ಶಾ ದೇಶದ ಅತಿದೊಡ್ಡ ಪಪ್ಪು ಎಂದಿದ್ದ ಅಭಿಷೇಕ್ ಬ್ಯಾನರ್ಜಿ ಸಂಬಂಧಿಗೆ ಸಮನ್ಸ್ ನೀಡಿದ ಇ.ಡಿ
ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಸೊಸೆ ಮನೇಕಾ ಗಂಭೀರ್ ಅವರನ್ನು ವಿದೇಶಕ್ಕೆ ತೆರಳದಂತೆ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಇ.ಡಿ ಶನಿವಾರ ಸಂಜೆ ತಡೆಹಿಡಿದಿದೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪ್ರಕಾರ ಇವರೇ ಅತಿದೊಡ್ಡ ಪಪ್ಪು!
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕಲ್ಲಿದ್ದಲು ಕಳ್ಳ ಸಾಗಣೆ ಕೇಸ್: ಇಡಿ ವಿಚಾರಣೆಗೆ ಅಭಿಷೇಕ್ ಬ್ಯಾನರ್ಜಿ ಹಾಜರು
ಕಲ್ಲಿದ್ದಲು ಕಳ್ಳ ಸಾಗಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಶುಕ್ರವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

ಉಪರಾಷ್ಟ್ರಪತಿ ಚುನಾವಣೆಗೂ ಮುನ್ನ ವಿಪಕ್ಷ ಅಭ್ಯರ್ಥಿಗೆ ಹಿನ್ನಡೆ: ಮತದಾನದಿಂದ ಟಿಎಂಸಿ ದೂರ
ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಟಿಎಂಸಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದೆ.

ಉತ್ತರಪ್ರದೇಶ ಯೋಗಿ ಅಭಿವೃದ್ಧಿ ಜಾಹೀರಾತಿನಲ್ಲಿ ಪ. ಬಂಗಾಳ ಫ್ಲೈ ಓವರ್ ಅವಾಂತರ: ಟಿಎಂಸಿ ಲೇವಡಿ
ಯೋಗಿ ಜಾಹೀರಾತೊಂದರಲ್ಲಿ ಪ.ಬಂಗಾಳದ ಫ್ಲೈ ಓವರ್ ಚಿತ್ರವನ್ನು ಬಳಸಿಕೊಳ್ಳಲಾಗಿರುವುದನ್ನು ಟಿ ಎಂ ಸಿ ಪಕ್ಷ ಪತ್ತೆ ಹಚ್ಚಿದ್ದು, ಪ್ರಕರಣ ವಿವಾದದ ರೂಪ ಪಡೆದುಕೊಂಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಇಡಿ ವಿಚಾರಣೆಗೆ ಹಾಜರು
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.

