ದೇಶರಾಜ್ಯಸಭೆ ಕಲಾಪ: ಅನಾರೋಗ್ಯದ ಕಾರಣ ರಜೆ ಕೋರಿದ ಮನಮೋಹನ್ ಸಿಂಗ್, ಚಿದಂಬರಂ
ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ವೈದ್ಯಕೀಯ ಆಧಾರದ ಮೇಲೆ ಪ್ರಸಕ್ತ ಮುಂಗಾರು ಅಧಿವೇಶನಕ್ಕೆ ಗೈರಾಗಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ ಎಂದು ರಾಜ್ಯಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಬುಧವಾರ ಹೇಳಿದ್ದಾರೆ.