ACB

ರಾಜಸ್ಥಾನ ಆಡಿಯೋ ಕ್ಲಿಪ್ ಪ್ರಕರಣ: ಕೇಂದ್ರ ಸಚಿವ, ಶಾಸಕರ ವಿರುದ್ಧ ಎಫ್ಐಆರ್ ದಾಖಲು
ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರಕ್ಕೆ ಸಂಬಂಧಿಸಿದ ಎರಡು ಆಡಿಯೋ ಕ್ಲಿಪ್ ಗಳಿಗೆ ಸಂಬಂಧಿಸಿದಂತೆ ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಪೊಲೀಸರು ಶನಿವಾರ ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ಸಿಗರೇಟ್ ಲಂಚ ಪ್ರಕರಣ, ಭ್ರಷ್ಟ ಪೊಲೀಸ್ ಅಧಿಕಾರಿಗಳ ಮೇಲೆ ಎಸಿಬಿ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಪಿ ಪ್ರಭುಶಂಕರ್, ಇನ್ಸ್ ಪೆಕ್ಟರ್ ಆರ್ ಎಂ ಅಜಯ್, ನಿರಂಜನ್ ಕುಮಾರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಹಣ ದುರ್ಬಳಕೆ ಆರೋಪ: ಆಪ್ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಕೇಸ್ ದಾಖಲಿಸಿದ ಎಸಿಬಿ
ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯುತ್ತಿರುವ ಮಧ್ಯೆಯೇ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಆಡಳಿತರೂಢ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಕೇಸ್ ದಾಖಲಿಸಿದೆ.

ಗಂಗಾವತಿ: ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ಪಹಣಿಯ 9ನೇ ಕಲಂನಲ್ಲಿ ತಿದ್ದುಪಡಿ ಮಾಡಲು ರೈತನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ನಿರೀಕ್ಷಕರೊಬ್ಬರು ಹಣದ ಸಮೇತ ಎಸಿಬಿ ಬಲೆಗೆ ಬಿದ್ದ ಘಟನೆ ನಗರದಲ್ಲಿ ನಡೆದಿದೆ.

ಕಲಬುರಗಿ: ಬೆಳ್ಳಂಬೆಳಗ್ಗೆ ಚೆಕ್‌ಪೋಸ್ಟ್ ಮೇಲೆ ಎಸಿಬಿ ದಾಳಿ
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣ ಹೊರವಲಯದಲ್ಲಿರುವ ಆರ್ ಟಿ ಓ ಚೆಕ್ ಪೊಸ್ಟ್ ಮೇಲೆ ಎಸಿಬಿ ಡಿವೈಎಸ್‌ಪಿ ಸುಧಾ ಆದಿ ನೇತೃತ್ವದಲ್ಲಿ 15 ಕ್ಕೂ ಅಧಿಕ ಸಿಬ್ಬಂದಿಗಳಿಂದ ದಾಳಿ ನಡೆಸಲಾಗಿದೆ.

ಸಾಲಮನ್ನಾದ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಬ್ಯಾಂಕ್ ಮ್ಯಾನೇಜರ್
ಸಾಲಮನ್ನಾದ ಎನ್ಒಸಿ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾದ ಬ್ಯಾಂಕ್ ಮ್ಯಾನೇಜರ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ತಾಲೂಕಿನ ಆಲೂರಿನಲ್ಲಿ ನಡೆದಿದೆ.

ವಿದರ್ಭ ನೀರಾವರಿ ಹಗರಣ: ಅಜಿತ್ ಪವಾರ್ಗೆ ಕ್ಲೀನ್ ಚಿಟ್ ನೀಡಿದ ಮಹಾರಾಷ್ಟ್ರ ಎಸಿಬಿ
ವಿದರ್ಭ ನೀರಾವರಿ ಹಗರಣದ ಪ್ರಮುಖ ಆರೋಪಿಯಾಗಿದ್ದ ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ(ಎನ್ಸಿಪಿ) ನಾಯಕ ಅಜಿತ್ ಪವಾರ್ ಗೆ ಮಹಾರಾಷ್ಟ್ರ ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ) ಕ್ಲೀನ್ ಚಿಟ್ ನೀಡಿದೆ.

ಬಿಜೆಪಿ ಜೊತೆ ಕೈ ಜೋಡಿಸಿದ್ದಕ್ಕೆ ನೀರಾವರಿ ಹಗರಣದಿಂದ ಅಜಿತ್ ಪವಾರ್ ಖುಲಾಸೆ!?: ಈ ಬಗ್ಗೆ ಎಸಿಬಿ ಹೇಳಿದ್ದಿಷ್ಟು...
ಬಿಜೆಪಿಗೆ ಸರ್ಕಾರ ರಚನೆ ಮಾಡಲು ಸಹಕರಿಸಿದ್ದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಮುಖ್ಯ ಆರೋಪಿಯಾಗಿದ್ದ 70,000 ಕೋಟಿ ರೂಪಾಯಿ ಮೊತ್ತದ ನೀರಾವರಿ ಹಗರಣವನ್ನು ಇತ್ಯರ್ಥಗೊಳಿಸಿದ್ದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು. ಈಗ ಅವೆಲ್ಲದಕ್ಕೂ ಮಹಾರಾಷ್ಟ್ರದ ಭ್ರಷ್ಟಾಚಾರ ನಿಗ್ರಹ ದಳ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿದೆ.

'ಮಹಾ'ಡ್ರಾಮ: ಅಜಿತ್ ಪವಾರ್ ವಿರುದ್ಧದ 70 ಸಾವಿರ ಕೋಟಿ ರೂ.ನೀರಾವರಿ ಹಗರಣ ಕೈಬಿಟ್ಟ ಎಸಿಬಿ
ದಿನಕ್ಕೊಂದು ರೀತಿಯ ರಾಜಕೀಯ ಡ್ರಾಮಕ್ಕೆ ಸಾಕ್ಷಿಯಾಗುತ್ತಿರುವ ಮಹಾರಾಷ್ಟ್ರದಲ್ಲಿ ಅಜಿತ್ ಕುಮಾರ್ ಉಪ ಮುಖ್ಯಮಂತ್ರಿಯಾಗುತ್ತಿದ್ದಂತೆ ಅವರ ವಿರುದ್ಧದ 70 ಸಾವಿರ ಕೋಟಿ ನೀರಾವರಿ ಹಗರಣದ ಕೇಸನ್ನು ಭ್ರಷ್ಟಾಚಾರ ನಿಗ್ರಹ ದಳ ಮುಚ್ಚಿ ಹಾಕಿದೆ.

