accident

ಹಾಸನ: ಹೆಲ್ಮೆಟ್ ಧರಿಸದೆ ಬುಲೆಟ್‌ನಲ್ಲಿ ಜಾಲಿ ರೈಡ್; ಹಂಪ್ ಕಾಣದೆ ರಸ್ತೆಗೆ ಬಿದ್ದು ಯುವತಿ ಸಾವು, ಸ್ನೇಹಿತೆ ಸ್ಥಿತಿ ಗಂಭೀರ
ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಗಾಯಾಳು ಸ್ವಾತಿಯನ್ನು (24) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಸ್ತೆಯಲ್ಲಿದ್ದ ಹಂಪ್ ಕಾಣದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಬಾಗಲಕೋಟೆಯ ಜಮಖಂಡಿ ಬಳಿ ಭೀಕರ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು
ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Chittoor-Bengaluru Highway: ಅಡ್ಡ ಬಂದ ಬೈಕರ್: ಅಪಘಾತ ತಪ್ಪಿಸಲು ಹೋದ ಕಂಟೇನರ್ ಕಾರಿನ ಮೇಲೆ ಬಿದ್ದು ಟೆಕ್ಕಿ ಸಾವು! Video
ಆಂಧ್ರ ಪ್ರದೇಶದ ಚಿತ್ತೂರು-ಬೆಂಗಳೂರಿನಲ್ಲಿ ಹೈವೇಯಲ್ಲಿ ಈ ದುರಂತ ಸಂಭವಿಸಿದ್ದು, ಕಾರಿನ ಮೇಲೆ ಕಂಟೇನರ್ ಲಾರಿ ಮಗುಚಿ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿ ಕಾರಿನೊಳಗಿದ್ದ ಟೆಕ್ಕಿ ಸಾವನ್ನಪ್ಪಿದ್ದಾರೆ.

ಭೀಕರ ಅಪಘಾತ: ಡಿವೈಡರ್ ಗೆ ಕ್ರೂಸರ್ ಢಿಕ್ಕಿ, ಶ್ರೀಶೈಲಂ ಯಾತ್ರೆಗೆ ತೆರಳಿದ್ದ ಕರ್ನಾಟಕದ ಮೂವರು ಸಾವು
ಆಂಧ್ರ ಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಕ್ರೂಸರ್ ವಾಹನ ಡಿವೈಡರ್ ಗೆ ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಬೆಂಗಳೂರು-ನೆಲಮಂಗಲ ಜಿಂದಾಲ್ ಫ್ಲೈ ಓವರ್ ಬಳಿ ಭೀಕರ ಅಪಘಾತ: KSRTC ಬಸ್ಗೆ ಕಾರು ಡಿಕ್ಕಿ; ಐವರು ಯುವಕರು ಸಾವು
ಬೆಂಗಳೂರು ಹೊರವಲಯ ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಐವರು ಯುವಕರು ಮೃತಪಟ್ಟಿದ್ದಾರೆ.

ಜಾಲಿರೈಡ್ ಗೆಂದು ಹೋದವರು ಜವರಾಯನ ಪಾದ ಸೇರಿದರು; ಹೊಸಕೋಟೆ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಪೋಷಕರ ಆಕ್ರಂದನ; Video
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ 6 ಮಂದಿ ಹಾಗೂ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ 7 ಮಂದಿ ಸಾವು; Video
ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ.

ಅಮೆರಿಕಾದಲ್ಲಿ ಪೊಲೀಸ್ ಅಧಿಕಾರಿ ಕಾರು ಅಪಘಾತಕ್ಕೆ ಭಾರತೀಯ ವಿದ್ಯಾರ್ಥಿನಿ ಬಲಿ: ಜಾಹ್ನವಿ ಕುಟುಂಬಕ್ಕೆ 260 ಕೋಟಿ ರೂ ಪರಿಹಾರ
ಪೊಲೀಸ್ ಕಾರಿನ ಡಿಕ್ಕಿ ರಭಸಕ್ಕೆ ಜಾಹ್ನವಿ ಕಂದುಲಾ ಅವರು 137 ಅಡಿ ಎತ್ತರಕ್ಕೆ ಹಾರಿ ರಸ್ತೆಬದಿ ಬಿದ್ದಿದ್ದರು. ವೇಗವಾಗಿ ಕಾರು ಓಡಿಸಿಕೊಂಡು ಬಂದಿದ್ದ ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಅವರು ಸೌತ್ ಲೇಕ್ ಯೂನಿಯನ್ ಕ್ರಾಸ್‌ವಾಕ್ ಬಳಿಯ ವೇಗ ಮೀತಿಯನ್ನು ಮೀರಿದ್ದರು.

ತುಮಕೂರಿನಲ್ಲಿ ಸರಣಿ ಅಪಘಾತ: ಇಬ್ಬರ ದುರ್ಮರಣ, Dysp ಸೇರಿ 9 ಮಂದಿಗೆ ಗಾಯ
ಘಟನೆಯಲ್ಲಿ ಡಿವೈಎಸ್ಪಿ ರಾಮಕೃಷ್ಣಪ್ಪ ಸೇರಿ 9 ಮಂದಿ ಗಾಯಗೊಂಡಿದ್ದು, ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡವರಲ್ಲಿ ಓರ್ವ ಮಹಿಳೆಯೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

