accused

ಮೋರ್ಬಿ ಸೇತುವೆ ಕುಸಿತ ದುರಂತ ಪ್ರಕರಣ: 1,262 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ, ಒರೆವಾ ಗ್ರೂಪ್‌ನ ಜಯಸುಖ್ ಪಟೇಲ್ ಆರೋಪಿ
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಗುಜರಾತ್‌ನ ಮೋರ್ಬಿಯಲ್ಲಿ ಸಂಭವಿಸಿದ ತೂಗುಸೇತುವೆ ಕುಸಿತ ದುರಂತ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 1,262 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಗೋಧ್ರೋತ್ತರ ಗಲಭೆ ಪ್ರಕರಣ: 22 ಆರೋಪಿಗಳ ಖುಲಾಸೆಗೊಳಿಸಿದ ಗುಜರಾತ್ ನ್ಯಾಯಾಲಯ
ಗುಜರಾತ್‌ನ ಪಂಚಮಹಲ್ ಜಿಲ್ಲೆಯ ದೆಲ್ವೋಲ್ ಗ್ರಾಮದಲ್ಲಿ ಗೋದ್ರಾ ಘಟನೆಯ ಬಳಿಕ ನಡೆದ ಹಿಂಸಾಚಾರದಲ್ಲಿ 17 ಮಂದಿ ಅಲ್ಪಸಂಖ್ಯಾತರನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದ 22 ಆರೋಪಿಗಳನ್ನು ಹಲೋಲ್ ಹೆಚ್ಚುವರಿ ಸತ್ರ ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ.

ಪಿಎಸ್‌ಐ ನೇಮಕಾತಿ ಹಗರಣ: ಆರೋಪಿ ಆರ್.ಡಿ.ಪಾಟೀಲ್‌ಗೆ ಸಿಐಡಿ ನೋಟಿಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಪಿಎಸ್‌ಐ (ಪೊಲೀಸ್ ಸಬ್ ಇನ್ಸ್‌ಪೆಕ್ಟರ್) ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ದಳವು (ಸಿಐಡಿ), ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಆರ್.ಡಿ.ಪಾಟೀಲ್'ಗೆ ನೋಟಿಸ್ ಜಾರಿ ಮಾಡಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಹರಿಯಾಣ: ಪೊಲೀಸ್ ಠಾಣೆಯಲ್ಲಿ ಆರೋಪಿಗೆ ಚಹಾ ಸೇವೆ, ಇಬ್ಬರು ಪೊಲೀಸರ ಅಮಾನತು
ವಂಚನೆಯ ಆರೋಪಿಗೆ ಟೀ ಪೂರೈಸಿದ ವಿಡಿಯೋ ವೈರಲ್ ಆದ ನಂತರ ಇಬ್ಬರು ಪೊಲೀಸರನ್ನು ಹರಿಯಾಣದ ಗೃಹ ಸಚಿವ ಅನಿಲ್ ವಿಜ್ ಸೇವೆಯಿಂದ ಅಮಾನತು ಪಡಿಸಿದ್ದಾರೆ. ಕೈಥಲ್ ಜಿಲ್ಲೆಯ ಪುಂದ್ರಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ದೂರುದಾರ ಮಹಿಳೆಯೊಬ್ಬರು ವಿಡಿಯೋ ತೋರಿಸಿದ ಕೂಡಲೇ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡುವಂತೆ ಗೃಹ ಸಚಿವರು ಆದೇಶಿಸಿದ್ದಾರೆ.

ನಮ್ಮ ಮೆಟ್ರೊ ಪಿಲ್ಲರ್ ಕುಸಿತ ಪ್ರಕರಣ: ನಾಗಾರ್ಜುನ ಕಂಪನಿ ಹೆಸರು ಸೇರಿ 9 ಮಂದಿಯ ಹೆಸರು ಎಫ್ಐಆರ್ ನಲ್ಲಿ ದಾಖಲು!
28 ವರ್ಷದ ತೇಜಸ್ವಿನಿ ಸುಲಾಖೆ ಮತ್ತು ಆಕೆಯ ಎರಡೂವರೆ ವರ್ಷದ ಮಗ ವಿಹಾನ್ ಎಲ್ ಸುಲಾಖೆ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಗೋವಿಂದಪುರ ಪೊಲೀಸರು ಎಫ್‌ಐಆರ್‌ನಲ್ಲಿ ನಾಗಾರ್ಜುನ ಕಂಪನಿ ಸೇರಿ 9 ಮಂದಿಯ ಹೆಸರನ್ನು ದಾಖಲಿಸಿಕೊಂಡಿದ್ದಾರೆ.

ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಪತ್ತೆಗಾಗಿ ಲುಕ್ ಔಟ್ ನೋಟಿಸ್
ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಪತ್ತೆಗಾಗಿ ಲುಕ್‌ಔಟ್ ನೋಟಿಸ್ ಹೊರಡಿಸಲಾಗಿದೆ. ಈ ವಿಚಾರದಲ್ಲಿ ತನಿಖೆಗೆ ಸಹಕರಿಸದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮೂಲ್ಕಿ ಬಳಿ ಅಪ್ರಾಪ್ತ ಬಾಲಕಿ ಜೊತೆ ಯುವಕ ಅಸಭ್ಯ ವರ್ತನೆ: ಕಂಬಕ್ಕೆ ಕಟ್ಟಿಹಾಕಿ ಹಲ್ಲೆ, ಆರೋಪಿಯ ದೂರಿನ ಮೇರೆಗೆ ಕೇಸು
ಮಂಗಳೂರಿನ ಮೂಲ್ಕಿಯ ಕೆರೆಕಾಡು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ವಶಕ್ಕೆ ಪಡೆದು ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿ ಬಂಧಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ ತಂದೆ ಇತರ ಇಬ್ಬರು ಸೇರಿ ಆರೋಪಿಯನ್ನು ಕಟ್ಟಿಹಾಕಿ ಥಳಿಸಿದ್ದಾರೆ. ಆರೋಪಿಗಳ ದೂರಿನ ಮೇರೆಗೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ಬಹುಮಾನ: ಗೃಹ ಇಲಾಖೆ
ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರದಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ತಮಿಳುನಾಡು ಕಾರು ಸ್ಫೋಟ ಪ್ರಕರಣ: ಬಂಧಿತ 5 ಮಂದಿ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ
ಕೊಯಮತ್ತೂರು ಕಾರ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐವರು ವ್ಯಕ್ತಿಗಳ ವಿರುದ್ಧ ಕಠಿಣವಾದ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

