accused

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಐವರು ಪ್ರಮುಖ ಆರೋಪಿಗಳು ಆರು ದಿನ ಎನ್ ಐಎ ಕಸ್ಟಡಿಗೆ
ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಐವರು ಪ್ರಮುಖ ಆರೋಪಿಗಳನ್ನು ಆರು ದಿನಗಳ ಕಾಲ ಕಸ್ಟಡಿಗೆ ಪಡೆದಿದೆ.

ಅಮಾಯಕರ ಹತ್ಯೆ ಮಾಡಿದವರ ಎನ್‌ಕೌಂಟರ್‌ಗೂ ಸರ್ಕಾರ ಸಿದ್ಧ: ಅಶ್ವತ್ಥನಾರಾಯಣ
ಮಂಗಳೂರಿನಲ್ಲಿ ಅಮಾಯಕರ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಎನ್‌ಕೌಂಟರ್ ಸೇರಿದಂತೆ ಯಾವುದೇ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ಧವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಎಲ್ಗಾರ್ ಪರಿಷತ್ ಪ್ರಕರಣ: 5 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಎನ್ಐಎ ಕೋರ್ಟ್
ಎಲ್ಗಾರ್ ಪರಿಷತ್-ಮಾವೋವಾದಿಗಳ ಸಂಪರ್ಕವಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ ಶೋಮಾ ಸೇನ್ ಹಾಗೂ ಇನ್ನೂ ನಾಲ್ವರ ಜಾಮೀನು ಅರ್ಜಿಯನ್ನು ಮುಂಬೈ ನ ವಿಶೇಷ ಎನ್ಐಎ ನ್ಯಾಯಾಲಯ ತಿರಸ್ಕರಿಸಿದೆ.

ಉದಯಪುರ ಟೈಲರ್ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬ 'ಬಿಜೆಪಿ ಸದಸ್ಯ': ಕಾಂಗ್ರೆಸ್ ಆರೋಪ
ರಾಜಸ್ತಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ರ ಅಮಾನುಷ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರು ಬಿಜೆಪಿ ಸದಸ್ಯ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕಾರಣಕ್ಕಾಗಿ ಪ್ರಕರಣವನ್ನು ತ್ವರಿತವಾಗಿ ಎನ್‌ಐಎಗೆ ವರ್ಗಾಯಿಸಿತೇ ಎಂದು ಕಾಂಗ್ರೆಸ್ ಸಂದೇಹ ವ್ಯಕ್ತಪಡಿಸಿದೆ.

ನಗರಸಭೆ ಸದಸ್ಯ ಜಗನ್ ಮೋಹನ್ ಕೊಲೆ ಕೇಸ್: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರ ಫೈರಿಂಗ್
ಕೋಲಾರ ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಅಕ್ರಮ ಮರಳು ಸಾಗಾಣಿಕೆ ತಡೆದ ಕಂದಾಯ ನಿರೀಕ್ಷಕ ಮತ್ತವರ ಕುಟುಂಬದವರ ಮೇಲೆ ಹಲ್ಲೆ: 10 ಆರೋಪಿಗಳ ಬಂಧನ
ಕಂದಾಯ ನಿರೀಕ್ಷಕ (Revenue inspector)ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ 10 ಮಂದಿ ಆರೋಪಿಗಳನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

ಗಾರ್ಮೆಂಟ್ಸ್ ಉದ್ಯಮಿ ಶ್ರೀಧರ್ ಹತ್ಯೆ ಪ್ರಕರಣ: ಆರೋಪಿ ಕಾಲಿಗೆ ಗುಂಡು!
ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿಯ ಕಾಲಿಗೆ ಖಾಕಿ ಪಡೆ ಗುಂಡು ಹಾರಿಸಿದೆ.

ನವದೆಹಲಿ: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಸಿಸಿಟಿವಿಯಲ್ಲಿ ಆರೋಪಿ ಪತ್ತೆ
ರಾಷ್ಟ್ರ ರಾಜಧಾನಿ ನವದೆಹಲಿಯ ರಂಜಿತ್ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಗೆ ಪ್ರಸ್ತುತ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸಿಂಘು ಗಡಿಯಲ್ಲಿ ಹತ್ಯೆ: ಮೂವರು ಆರೋಪಿಗಳು ಆರು ದಿನ ಪೊಲೀಸ್ ಕಸ್ಟಡಿಗೆ , 2 ಎಸ್ ಐಟಿಗಳಿಂದ ತನಿಖೆ
ಸಿಂಘು ಗಡಿ ಬಳಿಯ ರೈತರ ಪ್ರತಿಭಟನೆ ಸ್ಥಳದಲ್ಲಿ ನಡೆದ ಕಾರ್ಮಿಕರೊಬ್ಬರ ಬರ್ಬರ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದ್ದು, ಘಟನೆ ಬಗ್ಗೆ ತನಿಖೆಗಾಗಿ ಎರಡು ವಿಶೇಷ ತಂಡಗಳನ್ನು ಹರಿಯಾಣ ಪೊಲೀಸರು ರಚಿಸಿದ್ದಾರೆ.

