acquitted

2008 ಮಾಲೆಗಾಂವ್ ಸ್ಫೋಟ ಪ್ರಕರಣ: BJP ಮಾಜಿ ಸಂಸದೆ ಪ್ರಜ್ಞಾ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಸೇರಿ 7 ಆರೋಪಿಗಳು ಖುಲಾಸೆ
ಸೆಪ್ಟೆಂಬರ್ 29, 2008 ರಂದು ಮಹಾರಾಷ್ಟ್ರದ ಮಾಲೆಗಾಂವ್ ಪಟ್ಟಣದ ಮಸೀದಿಯ ಬಳಿ ಮೋಟಾರ್ ಸೈಕಲ್‌ಗೆ ಕಟ್ಟಲಾಗಿದ್ದ ಸ್ಫೋಟಕ ಸಾಧನವೊಂದು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಆರು ಜನರು ಸಾವನ್ನಪ್ಪಿ, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

Drugs case: ರಾಗಿಣಿ ದ್ವಿವೇದಿ ಬಚಾವ್; ತುಪ್ಪದ ಹುಡುಗಿಯ ವಿರುದ್ಧದ ಕೇಸ್ ಖುಲಾಸೆ
2020 ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಭಾರೀ ಸದ್ದು ಮಾಡಿತ್ತು. ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ವಿರುದ್ಧ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ಬಂಧಿಸಲಾಗಿತ್ತು.

ಭಯೋತ್ಪಾದನೆ ಚಟುವಟಿಕೆ ಆರೋಪ: ಪಾಕ್ ಪ್ರಜೆ ಸೇರಿದಂತೆ ಮೂವರ ಖುಲಾಸೆ
ಬೆಂಗಳೂರಿನ ನಿವಾಸಿಗಳಾದ ಸೈಯದ್ ಅಬ್ದುಲ್ ರೆಹಮಾನ್ , ಅಫ್ಸರ್ ಪಾಷಾ ಅಲಿಯಾಸ್ ಖುಶಿರುದ್ದೀನ್ ಮತ್ತು ಪಾಕಿಸ್ತಾನದ ಪ್ರಜೆ ಮೊಹಮ್ಮದ್ ಫಹಾದ್ ಹಿ ಅಲಿಯಾಸ್ ಮೊಹಮ್ಮದ್ ಕೋಯಾ ಖುಲಾಸೆಗೊಂಡವರು.

ಲೋಕಾಯುಕ್ತ ಪೊಲೀಸರ ಕೆಟ್ಟ ತನಿಖೆಯಿಂದಾಗಿ ಆರೋಪಿಗಳು ಖುಲಾಸೆ: ನ್ಯಾಯಾಧೀಶ ಕೆ.ಎಂ ರಾಧಾಕೃಷ್ಣ ಬೇಸರ
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಯ ಕಳಪೆ ತನಿಖೆಯಿಂದಾಗಿ ಆರೋಪಿಗಳನ್ನು ಖುಲಾಸೆಗೊಳಿಸುವಾಗ ನ್ಯಾಯಾಧೀಶರು ಈ ರೀತಿ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನ ಹೋಂಸ್ಟೇ ಮೇಲೆ ದಾಳಿ: ಎಲ್ಲಾ 39 ಆರೋಪಿಗಳು ಖುಲಾಸೆ!
ಆರೋಪಿಗಳು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ ಘಟನೆಯ ವಿಡಿಯೋಗಳು ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾದ ನಂತರ ಘಟನೆ ರಾಷ್ಟ್ರ ಗಮನ ಸೆಳೆದಿತ್ತು.

ರಂಜಿತ್ ಸಿಂಗ್ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖುಲಾಸೆ
ಮಾಜಿ ಮ್ಯಾನೇಜರ್ ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ.

ಪಿಯು ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಎಲ್ಲಾ ಆರೋಪಿಗಳು ಖುಲಾಸೆ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 2015-16ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಎಲ್ಲಾ 15 ಆರೋಪಿಗಳನ್ನು ಖುಲಾಸೆಗೊಳಿಸಿ ಬೆಂಗಳೂರು ನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ನಕ್ಸಲ್ ಜೊತೆಗಿನ ನಂಟು ಪ್ರಕರಣ: ದೆಹಲಿ ವಿವಿ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಖುಲಾಸೆ
ನಕ್ಸಲ್ ನಂಟು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ. ಎನ್. ಸಾಯಿಬಾಬಾ ಅವರನ್ನು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ಮಂಗಳವಾರ ಖುಲಾಸೆಗೊಳಿಸಿದೆ.

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಸಜ್ಜನ್ ಕುಮಾರ್ ಖುಲಾಸೆಗೊಳಿಸಿದ ದೆಹಲಿ ಕೋರ್ಟ್
1984 ರ ಸಿಖ್ ವಿರೋಧಿ ದಂಗೆ ವೇಳೆ ವ್ಯಕ್ತಿಯೊಬ್ಬನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಬುಧವಾರ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದೆ.

