actor Darshan

2 ಗಂಟೆ ಕಾದರೂ ಸೆಲ್ನಿಂದ ಹೊರಬರದ ದರ್ಶನ್: 'ದಾಸ'ನ ಭೇಟಿಗಾಗಿ ಜೈಲಿಗೆ ಹೋಗಿದ್ದ ರಚಿತಾ ರಾಮ್ಗೆ ತೀವ್ರ ನಿರಾಸೆ!
ನಟಿ ರಚಿತಾ ರಾಮ್ ಅವರು ದರ್ಶನ್ ತಮ್ಮ ಭೇಟಿಗೆ ಬರಬಹುದು ಎಂದು ಸುಮಾರ ಎರಡು ಗಂಟೆಗಳ ಕಾಲ ಕಾದು ಕುಳಿತಿದ್ದರು.

ಮಾಫಿ ಸಾಕ್ಷಿ ತಡೆಯಲು ದರ್ಶನ್ ಹಲವು ಕಸರತ್ತು: ಪ್ರದೋಷ್ ಹೇಳಿಕೆ ದಾಖಲು ಮುಂದೂಡಿಕೆ ಕೋರಿ ಮತ್ತೊಂದು ಅರ್ಜಿ!
ಪ್ರದೋಷ್ ಮಾಫಿ ಸಾಕ್ಷಿಯಾಲು ಒಪ್ಪಿಗೆ ನೀಡಿರುವ 59ನೇ ಸಿಸಿಹೆಚ್ ಕೋರ್ಟ್, ಇದೀಗ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ಸೆಪ್ಟೆಂಬರ್ 28ರಂದು ದಿನಾಂಕ ನಿಗದಿ ಮಾಡಿದೆ.

ತಾಯಿಯ ಸ್ಥಾನದಲ್ಲಿ ನಿಂತು D ಬಾಸ್ಗೆ ನ್ಯಾಯ ಒದಗಿಸಿ; ರಾಷ್ಟ್ರಪತಿಗೆ ದರ್ಶನ್ ಫ್ಯಾನ್ಸ್ ಮನವಿ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ಸಿಗುವುದು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿಗಳು ನೇರವಾಗಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗೆ ಕನ್ನಡದಲ್ಲೇ ಭಾವನಾತ್ಮಕ ಪತ್ರ ಬರೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ನಟ ದರ್ಶನ್ ವಿರುದ್ಧವೇ ತಿರುಗಿಬಿದ್ದ ಪ್ರದೋಷ್ ಇನ್ಮುಂದೆ ಆರೋಪಿಯಲ್ಲ; ಚಾರ್ಜ್ಶೀಟ್ನಿಂದ ಹೆಸರು ಡಿಲೀಟ್!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಈಗ ಮಾಫಿ ಸಾಕ್ಷಿಯಾಗಿರುವುದರಿಂದ ಆರೋಪಿ ಎಂಬುದನ್ನು ಡಿಲಿಟ್ ಮಾಡುವಂತೆ ಕೋರ್ಟ್ ಸೂಚನೆ ನೀಡಿದೆ.

ಕೊಲೆ ಆರೋಪಿ ನಟ ದರ್ಶನ್ಗೆ ಮತ್ತೊಂದು ಶಾಕ್: ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ!
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ರಾವ್ ಮಾಫಿ ಸಾಕ್ಷಿ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ತೂಗುದೀಪ ಪರವಾಗಿ ಪತ್ನಿ ವಿಜಯಲಕ್ಷ್ಮಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಪರ ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ವಿಜಯಲಕ್ಷ್ಮಿ!
ಪವಿತ್ರಾ ಗೌಡ ಅವರಿಗೆ ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಹಲ್ಲೆ ನಡೆಸಿ, ಹತ್ಯೆ ಮಾಡಲಾಗಿತ್ತು. ಈ ಸಂಬಂಧ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!
ಪ್ರಕರಣದ ಆರೋಪಿ ಆಗಿರುವ ಪ್ರದೋಶ್, ಮಾಫಿ ಸಾಕ್ಷಿ ದಾಖಲಿಸಲು ಅರ್ಜಿ ಹಾಕಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದರ್ಶನ್ ಅರ್ಜಿಯನ್ನು ಕೋರ್ಟ್ ತಳ್ಳಿ ಹಾಕಿದೆ.

ರೇಣುಕಾಸ್ವಾಮಿ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ; ಫಾರ್ಮ್ಹೌಸ್ ಪಕ್ಷಿ ವಿವಾದದಲ್ಲಿ ಕೋರ್ಟ್ನಿಂದ ಸಮನ್ಸ್ ಜಾರಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಜೊತೆಗೆ ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರಿಗೆ ಮೈಸೂರಿನ ಫಾರ್ಮ್ಹೌಸ್ ವಿಚಾರದಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಮತ್ತೊಂದು ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಆ ಕುರಿತ ವರದಿ ಇಲ್ಲಿದೆ:

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಪ್ರದೋಷ್ಗೆ ಅನುಮತಿ; ಹೈಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್!
ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಅಂಗೀಕರಿಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ದರ್ಶನ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

