actor Darshan

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಧರಿಸಿದ್ದ ಶೂ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆ!
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಪೊಲೀಸರು, ಹತ್ಯೆ ದಿನ ನಟ ದರ್ಶನ್ ಧರಿಸಿದ್ದ ಶೂವನ್ನು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರೇಣುಕಾಸ್ವಾಮಿ ಕೊಲೆ ಕೇಸ್: 17 ಆರೋಪಿಗಳ ಬಂಧನ, ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಬಹಿರಂಗ- ಪೊಲೀಸ್ ಆಯುಕ್ತ ಬಿ ದಯಾನಂದ್
ತನಿಖೆಯ ವಿವರಗಳನ್ನು ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು, ಪೊಲೀಸರ ಸಮಯ ಪ್ರಜ್ಞೆಯಿಂದ ಪ್ರಕರಣ ಹೊರಬಂದಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ.

ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ; ಕೇಸಿನಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ: ಡಾ ಜಿ ಪರಮೇಶ್ವರ್
ನಟ ದರ್ಶನ್ ತೂಗುದೀಪ ಸಹಚರರಿಂದ ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ: ಸ್ಯಾಂಡಲ್ ವುಡ್ ಪ್ರತಿಕ್ರಿಯೆ ಹೀಗಿತ್ತು...
ಕೊಲೆ ಪ್ರಕರಣದಲ್ಲಿ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಬಂಧನಕ್ಕೊಳಗಾಗಿದ್ದು, ಈ ಸಂಬಂಧ ಸ್ಯಾಂಡಲ್ ವುಡ್ ನಿಧಾನಗತಿಯಲ್ಲಿ ಪ್ರತಿಕ್ರಿಯೆ ನೀಡಲು ಆರಂಭಿಸಿದೆ.

ನಟ ದರ್ಶನ್‌ಗೆ ಸಾಲು ಸಾಲು ಸಂಕಷ್ಟ: ರಾಜಕಾಲುವೆ ಒತ್ತುವರಿ ಕೇಸ್‌ಗೆ ಮರುಜೀವ; ತೂಗುದೀಪ ನಿವಾಸಕ್ಕೂ ಸಂಚಕಾರ!
ಹಿಂಸೆ ಮತ್ತು ಕೊಲೆ ಪ್ರಕರಣದಲ್ಲಷ್ಟೇ ನಟ ದರ್ಶನ್ ಅವರಿಗೆ ಸಂಕಷ್ಟ ಎದುರಾಗಿಲ್ಲ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಕೇಸ್ ಹಾಗೂ ರಾಜಕಾಲುವೆ ಒತ್ತುವರಿ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ.

TNIE ವರದಿಗಾರನ ಮೇಲೆ ಹಲ್ಲೆ: BJP ಖಂಡನೆ
ಸುದ್ದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಗಾರ ಟಿಟಿ ರಕ್ಷಿತ್ ಗೌಡ ಅವರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳ ತಂಡವು ಕೋರ್ಟ್ ಹಾಲ್ ಹೊರಗೆ ದಾಳಿ ಮಾಡಿ, ಅವರ ಮೊಬೈಲ್ ಫೋನ್ ದೋಚಿದ ಘಟನೆಗೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದೆ.

ನಟ ದರ್ಶನ್ ಪ್ರಕರಣ: ಪೊಲೀಸರ ಮುಂದೆ ಹಾಸ್ಯ ನಟ ಚಿಕ್ಕಣ್ಣ ಹೇಳಿದ್ದು ಹೀಗೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣ ಅವರನ್ನು ಪೊಲೀಸರು ಸೋಮವಾರ ವಿಚಾರಣೆ ನಡೆಸಿದ್ದಾರೆ.

ದರ್ಶನ್ ಬಂಧನ ಪ್ರಕರಣ: ಒತ್ತಡಕ್ಕೆ ಮಣಿಯಲ್ಲ, ಯಾರಿಗೂ ಸಾಫ್ಟ್ ಕಾರ್ನರ್ ತೋರಿಸಲ್ಲ- ಗೃಹ ಸಚಿವ ಜಿ ಪರಮೇಶ್ವರ
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಯಾರಿಗೂ ಸಾಫ್ಟ್ ಕಾರ್ನರ್ ತೋರಿಸುವ ಪ್ರಶ್ನೆಯೇ ಇಲ್ಲ. ಪೊಲೀಸರು ಯಾವುದೇ ಪ್ರಭಾವಕ್ಕೆ ಒಳಗಾಗದೆ ಕ್ರಮ ಕೈಗೊಳ್ಳುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಪ್ರತಿಪಾದಿಸಿದ್ದಾರೆ.

ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿ: ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್ ಜಾರಿ!
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ. ಪ್ರಕರಣ ಸಂಬಂಧ ಹಾಸ್ಯನಟ ಚಿಕ್ಕಣ್ಣ ಅವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

