ಸಿನಿಮಾ ಸುದ್ದಿನಿವೃತ್ತ ಐಎಎಸ್ ಅಧಿಕಾರಿ, ನಟ ಕೆ. ಶಿವರಾಮ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು
'ಬಾ ನಲ್ಲೆ ಮಧು ಚಂದ್ರಕೆ' ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿದೆ. ಸದ್ಯಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.