ಮಟ್ಕಾ ಜೂಜು ಆಡಿಸುತ್ತಿದ್ದ ದೂರಿನ ಹಿನ್ನೆಲೆಯಲ್ಲಿ ಜಿಲ್ಲೆಯ ಚನ್ನಗಿರಿ ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆದೊಯ್ದ ಸಂದರ್ಭ ನಡೆದಿದ್ದ ಆದಿಲ್ ಸಾವು ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ಸೋಮವಾರ ತನಿಖೆ ಆರಂಭಿಸಿದ್ದಾರೆ.