ರಾಜ್ಯಕಡತಗಳಿಗೆ ಇಂಗ್ಲಿಷಿನಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಿ; ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ
ಆಡಳಿತದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅಧಿಕಾರಿಗಳು ಮತ್ತು ಸಚಿವರು ಕಡತಗಳಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಟಿಪ್ಪಣಿ ಹಾಕುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.