ರಾಜ್ಯಕೃಷಿ ವಿವಿಗಳು ಗ್ರಾಮಗಳನ್ನು ದತ್ತು ಪಡೆಯಬೇಕು: ಬಿ.ಸಿ. ಪಾಟೀಲ್
ರಾಜ್ಯದ ಕೃಷಿವಿಶ್ವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನಾಂದಿಹಾಡಬೇಕು. ಇದು ಅತ್ಯಂತ ಜರೂರಿನ ಕೆಲಸ ಎಂದು ಕೃಷಿ ಸಚಿವರೂ ಆಗಿರುವ ಕೃಷಿವಿಶ್ವದ್ಯಾಲಯಗಳ ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ.