aggregators

ಓಲಾ, ಉಬರ್ ಆಟೋ ಸೇವೆಗೆ ಶೇ.5 ಸೇವಾ ಶುಲ್ಕ: ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.

ಸುರಕ್ಷತೆ ಖಚಿತಪಡಿಸಿಕೊಳ್ಳಿ, ಇಲ್ಲದಿದ್ದರೆ ಕಠಿಣ ಕ್ರಮ ಎದುರಿಸಿ: ಆ್ಯಪ್ ಆಧಾರಿತ ಟ್ಯಾಕ್ಸಿ ಕಂಪನಿಗಳಿಗೆ ನಗರ ಪೊಲೀಸ್ ಆಯುಕ್ತ ಎಚ್ಚರಿಕೆ
ಮೊಬೈಲ್ ಆ್ಯಪ್ ಆಧಾರಿತ ಸಾರಿಗೆ, ಸರಕು ಸಾಗಣೆ ಹಾಗೂ ಆಹಾರ ಪೂರೈಕೆ ಮಾಡುವ ಕಂಪನಿಗಳು ಗ್ರಾಹಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ನಿಯಮ ಮೀರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಶನಿವಾರ ಎಚ್ಚರಿಗೆ ನೀಡಿದ್ದಾರೆ.

