Ahinda

ಅಹಿಂದ ನಾಯಕರಾಗಿ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಸ್ಥಾನ ಭದ್ರ; ದಲಿತ ಸಿಎಂ ವಿಚಾರ ನಗಣ್ಯ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೂಲಕ ದಲಿತ ಮುಖಂಡರ ಬೆಂಬಲ ಪಡೆಯುವ ಮೂಲಕ ಮುಖ್ಯಮಂತ್ರಿ ಹಾಗೂ ಅಹಿಂದ ನಾಯಕ ಎಂಬ ಸ್ಥಾನವನ್ನು ನಿರ್ವಿವಾದವಾಗಿ ಭದ್ರವಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಅಹಿಂದ-ಲಿಂಗಾಯತ ಮತಗಳ ಕ್ರೋಢೀಕರಣಕ್ಕೆ ಕಾಂಗ್ರೆಸ್ ತಂತ್ರ; ಬಿಜೆಪಿ ಏಕಾಂಗಿ ಹೋರಾಟ!
ಉತ್ತರ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮೇ 7 ರಂದು ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಪ್ರಬಲ ಶಕ್ತಿಯಾಗಿ ಲಿಂಗಾಯತ ಮತ್ತು ಅಹಿಂದ ಸಮುದಾಯಗಳನ್ನು ಬಳಸಿಕೊಳ್ಳಲು ಕಾಂಗ್ರೆಸ್ ಯೋಜನೆ ರೂಪಿಸಿದೆ.

'ಅಹಿಂದ' ಮತಗಳತ್ತ HDK ಚಿತ್ತ: ಮೋದಿ ಕೈ ಬಲಪಡಿಸಲು ಬೆಂಬಲ ನೀಡುವಂತೆ ದಲಿತರು, ಮುಸ್ಲಿಮರಿಗೆ ಮನವಿ!
ರಾಜ್ಯದ ಅಭಿವೃದ್ಧಿಗಾಗಿ ಜೆಡಿಎಸ್ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಅಲ್ಪಸಂಖ್ಯಾತರು ಮತ್ತು ದಲಿತರು ಬೆಂಬಲ ನೀಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಮನವಿ ಮಾಡಿಕೊಂಡರು.

ವರುಣಾದಲ್ಲಿ ಸಿದ್ದರಾಮಯ್ಯ ಲಾಸ್ಟ್ ಎಲೆಕ್ಷನ್ ಥೀಮ್: ಸಿದ್ದು ತವರಲ್ಲಿ ಎಚ್ ಡಿಕೆ 'ಅಹಿಂದ' ಕಾರ್ಡ್ ಗೇಮ್!
ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರುತ್ತಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ವರುಣಾದಲ್ಲಿ ಅಹಿಂದ ಸಮಾವೇಶ ಆಯೋಜಿಸುವ ಮೂಲಕ ಜೆಡಿಎಸ್ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದರು.

ಎಷ್ಟು ಮಂದಿ ಅಹಿಂದ ಮತದಾರರು ತಮ್ಮೊಂದಿಗಿದ್ದಾರೆ ಎಂದು ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿಎಂ ಬೊಮ್ಮಾಯಿ
ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರುದ್ಧ ಇಲ್ಲ ಎಂದು ಬೊಮ್ಮಾಯಿ ಹೇಳಿದರು. ತಮ್ಮ ಸರ್ಕಾರ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಹೆಚ್ಚಿಸುತ್ತಿರುವುದಾಗಿ ತಿಳಿಸಿದರು.

ಬೆಣ್ಣೆನಗರಿ ದಾವಣಗೆರೆಯಲ್ಲಿ 'ಸಿದ್ದರಾಮೋತ್ಸವ'ಕ್ಕೆ ಭರ್ಜರಿ ತಯಾರಿ: 6 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ, 'ಅಹಿಂದ'ನಾಯಕನ ಹುಟ್ಟುಹಬ್ಬ ಸಂಭ್ರಮ ಹೇಗಿದೆ?
ಮಾಜಿ ಮುಖ್ಯಮಂತ್ರಿ 'ಅಹಿಂದ'ನಾಯಕ ಎಂದು ಗುರುತಿಸಿಕೊಂಡಿರುವ ಸಿದ್ದರಾಮಯ್ಯನವರಿಗೆ ಇಂದು ಬುಧವಾರ ಆಗಸ್ಟ್ 3ಕ್ಕೆ 75ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಭಾರೀ ಮಳೆ, ಪ್ರವಾಹ ಭೀತಿಯ ನಡುವೆಯೂ ಅವರ ಅಭಿಮಾನಿಗಳು ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಸಿದ್ದರಾಮೋತ್ಸವ ಹಮ್ಮಿಕೊಂಡಿದ್ದಾರೆ.

ಅಹಿಂದ ಮತದಾರರನ್ನು ಸೆಳೆಯಲು, ಸಿದ್ದರಾಮಯ್ಯ ಪ್ರಾಬಲ್ಯ ಕುಗ್ಗಿಸಲು ಬಿಜೆಪಿ ಪ್ಲಾನ್!
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳ ಪಟ್ಟಿಯನ್ನು ಯುವ ನಾಯಕರು ಹಿಂದುಳಿದ ಸಮುದಾಯಗಳಿಗೆ ತಲುಪಸಲು ಮುಂದಾಗಿದ್ದಾರೆ.

ಉಪಚುನಾವಣೆಯಲ್ಲಿ 'ಕೈ' ಹಿಡಿದ ಅಹಿಂದ: ಹಾನಗಲ್ ಗೆಲುವಿನ ಕ್ರೆಡಿಟ್ ಪಡೆಯಲು 'ಟಗರು' ಮುಂದು; ಎಐಸಿಸಿಗೆ ಸಿದ್ದರಾಮಯ್ಯ ಸಂದೇಶ?
ಇತ್ತೀಚೆಗೆ ನಡೆದ ಹಾನಗಲ್ ಮತ್ತು ಸಿಂದಗಿ ವಿಧಾನ ಸಭೆ ಉಪಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ ನಡೆಸಿದ್ದರು.

'ಅಹಿಂದ' ಎಂಬುದು ಸಿದ್ದರಾಮಯ್ಯ ಅವರ ವೋಟ್ ಬ್ಯಾಂಕ್: ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

