Ahmedabad

ICC World Cup 2023: ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಸೋಲಿಗೆ ಕಾರಣಗಳು!
ಭಾರತ ಕ್ರಿಕೆಟ್ ತಂಡದ ವಿಶ್ವಕಪ್ (ICC World Cup 2023) ಗೆಲ್ಲುವ ಆಸೆ ಭಗ್ನಗೊಂಡಿದ್ದು, ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ ಅಂತರದಲ್ಲಿ ಹೀನಾಯ ಸೋಲು ಕಂಡಿದೆ. ಟೂರ್ನಿಯುದ್ದಕ್ಕೂ ಅಜೇಯವಾಗಿದ್ದ ಭಾರತ ತಂಡ ಫೈನಲ್ ನಲ್ಲಿ ಸೋಲಲು ಕಾರಣವಾದ ಅಂಶಗಳು ಇಲ್ಲಿವೆ.

ICC World Cup 2023 Final: ಸೋಲಿನ ಬೆನ್ನಲ್ಲೇ ಮೈದಾನದಲ್ಲೇ ಕಣ್ಣೀರಿಟ್ಟ ನಾಯಕ ರೋಹಿತ್ ಶರ್ಮಾ, ಮಹಮದ್ ಸಿರಾಜ್
ಭಾರತ ಕ್ರಿಕೆಟ್ ತಂಡದ ವಿಶ್ವಕಪ್ (ICC World Cup 2023) ಗೆಲ್ಲುವ ಆಸೆ ಭಗ್ನಗೊಂಡಿದ್ದು, ಫೈನಲ್ ಪಂದ್ಯದಲ್ಲಿ ಭಾರತ ಸೋಲುತ್ತಿದ್ದಂತೆಯೇ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ಮಹಮದ್ ಸಿರಾಜ್ ಮೈದಾನದಲ್ಲೇ ಕಣ್ಣೀರು ಹಾಕಿದರು.

ವಿಶ್ವಕಪ್ ಗೆಲ್ಲದಿದ್ದರೂ ಹೃದಯ ಗೆದ್ದಿದ್ದೀರಿ, ಯಾವಾಗಲೂ ನಿಮ್ಮೊಂದಿಗಿದ್ದೇವೆ: ಫೈನಲ್ ಸೋತ ಭಾರತ ತಂಡಕ್ಕೆ ಪ್ರಧಾನಿ ಮೋದಿ ಸಾಂತ್ವನ
ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ನಲ್ಲಿ ಸೋತ ಭಾರತ ತಂಡದ ಪರವಾಗಿ ನಿಂತಿರುವ ಪ್ರಧಾನಿ ನರೇಂದ್ರ ಮೋದಿ, ವಿಶ್ವಕಪ್ ಗೆಲ್ಲದಿದ್ದರೂ ಹೃದಯ ಗೆದ್ದಿದ್ದೀರಿ, ಯಾವಾಗಲೂ ನಿಮ್ಮೊಂದಿಗಿದ್ದೇವೆ ಎಂದು ಸಂತೈಸಿದ್ದಾರೆ.

ಟ್ರಾವಿಸ್ ಹೆಡ್ ಶತಕ: ವಿಶ್ವಕಪ್ ಫೈನಲ್ ನಲ್ಲಿ ಭಾರತಕ್ಕೆ ಹೀನಾಯ ಸೋಲು, 6ನೇ ಬಾರಿಗೆ ಆಸಿಸ್ ಚಾಂಪಿಯನ್
ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.

ICC Cricket World Cup 2023: ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ದಾಖಲೆ ಮುರಿದ ಕನ್ನಡಿಗ ಕೆಎಲ್ ರಾಹುಲ್
ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕೋಚ್ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ICC Cricket World Cup 2023: ಕ್ರಿಸ್ ಗೇಯ್ಲ್ ಸಿಕ್ಸರ್ ದಾಖಲೆ ಸೇರಿ ಹಲವು ದಾಖಲೆ ಮುರಿದ ನಾಯಕ ರೋ'ಹಿಟ್' ಶರ್ಮಾ
ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕ್ರಿಸ್ ಗೇಯ್ಲ್ ಸಿಕ್ಸರ್ ದಾಖಲೆ ಸೇರಿ ಹಲವು ದಾಖಲೆಗಳನ್ನು ಮುರಿದಿದ್ದಾರೆ.

ವಿಶ್ವಕಪ್ ಫೈನಲ್: ಮೊಟೇರಾ ಕ್ರೀಡಾಂಗಣದತ್ತ ಗಣ್ಯರು, ಅಭಿಮಾನಿಗಳು, ಸುಮಾರು 6,000 ಪೊಲೀಸರ ನಿಯೋಜನೆ
ಭಾರತ- ಆಸ್ಟ್ರೇಲಿಯಾ ನಡುವಣ ಹೈವೋಲ್ಟೆಜ್ ವಿಶ್ವಕಪ್ ಕ್ರಿಕೆಟ್ ಪಂದ್ಯ ವೀಕ್ಷಣೆಗಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಅಭಿಮಾನಿಗಳು ಕ್ರೀಡಾಂಗಣದತ್ತ ಆಗಮಿಸುತ್ತಿದ್ದು, ಭದ್ರತೆಗಾಗಿ ಸುಮಾರು 6,000 ಪೊಲೀಸರನ್ನು ನಿಯೋಜಿಸಲಾಗಿದೆ.

ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಆರಂಭಕ್ಕೆ ಕ್ಷಣಗಣನೆ: ಕ್ರಿಕೆಟ್ ಪ್ರೇಮಿಗಳಲ್ಲಿ ಹೆಚ್ಚಿದ ಕಾತರ, ಉತ್ಸಾಹ
ವರ್ಷದ ಅತ್ಯಂತ ರೋಮಾಂಚಕಾರಿ ಕ್ರೀಡಾ ಪಂದ್ಯಾವಳಿ, ಹೈವೋಲ್ಟೇಜ್ ಐಸಿಸಿ ಪುರುಷರ ಏಕದಿನ ವಿಶ್ವಕಪ್ 2023, ಗ್ರಾಂಡ್ ಫಿನಾಲೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಗುಜರಾತ್ ನ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಕ್ರಿಕೆಟ್ ಅಭಿಮಾನಿಗಳ ಕಾತರ, ಉತ್ಸಾಹ ಜೋರಾಗಿದೆ.

ICC World Cup 2023: ನಾಳೆ ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯ; ಪ್ರಧಾನಿ ಮೋದಿ, ಆಸ್ಟ್ರೇಲಿಯಾದ ಉಪ ಪ್ರಧಾನಿ ಖುದ್ದು ಹಾಜರಿ!
ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಹಣಾಹಣಿಗೆ ವೇದಿಕೆ ಸಿದ್ಧವಾಗಿದ್ದು, ಜಿದ್ದಾಜಿದ್ದಿನ ಪ್ರಶಸ್ತಿ ಫೈಟ್'ಗೆ ಬದ್ಧವೈರಿಗಳಾದ ಭಾರತ ಹಾಗೂ ಆಸ್ಟ್ರೇಲಿಯಾ ಆಟಗಾರರು ಸಜ್ಜಾಗುತ್ತಿದ್ದಾರೆ. ಫೈನಲ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದ್ದು...

