ರಾಜ್ಯಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗನ ಆಯ್ಕೆ: ಖರ್ಗೆಗೆ ಸಿದ್ದರಾಮಯ್ಯ, ಡಿಕೆಶಿ ಅಭಿನಂದನೆ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯದ ಇತರೆ ರಾಜಕೀಯ ನಾಯಕರು ಖರ್ಗೆಯವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.