AICC president polls

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ದಯವಿಟ್ಟು ನೇತಾಗಿರಿ ಬೇಡ, ಖರ್ಗೆ ಬಣಕ್ಕೆ ಶಶಿ ತರೂರ್ ಕಿವಿಮಾತು
ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಮಲ್ಲಿಕಾರ್ಜುನ ಖರ್ಗೆ ಅವರ ಗುಂಪಿನ ವಿರುದ್ಧ ಶಶಿ ತರೂರ್ ಭಾನುವಾರ ಮುಸುಕಿನ ಗುದ್ದಾಟ ನಡೆಸಿದ್ದಾರೆ.

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಪಕ್ಷದ ಹಿರಿಯ ಮುಖಂಡರೆಲ್ಲ ಖರ್ಗೆಗೆ ಬೆಂಬಲ- ಗೆಹ್ಲೋಟ್
ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷದ ಹಿರಿಯ ಮುಖಂಡರೆಲ್ಲ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸಲು ನಿರ್ಧರಿಸಿರುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ: ದೇಶಾದ್ಯಂತ ಪಕ್ಷದ ಕಾರ್ಯಕರ್ತರಿಂದ ನನಗೆ ಬೆಂಬಲ ಇದೆ ಎಂದ ಶಶಿ ತರೂರು
ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹೋರಾಟ ನಡೆಸಲು ತನಗೆ ದೇಶಾದ್ಯಂತ ಪಕ್ಷದ ಕಾರ್ಯಕರ್ತರ ಬೆಂಬಲವಿದೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರು ಸೋಮವಾರ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷೀಯ ಚುನಾವಣೆ: ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿಯಿಂದ ಅಧಿಸೂಚನೆ ಪ್ರಕಟ
ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಸಮಿತಿ ಗುರುವಾರ ಅಧಿಸೂಚನೆ ಹೊರಡಿಸಿದೆ. ಇದರೊಂದಿಗೆ ಸುಧೀರ್ಘ ಕಾಲ ಪಕ್ಷದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಸೋನಿಯಾ ಗಾಂಧಿ ನಂತರ ಉತ್ತರಾಧಿಕಾರಿ ಆಯ್ಕೆಯ ಚುನಾವಣೆಗೆ ಸಿದ್ಧತೆ ನಡೆಸಲಾಗಿದೆ.

ರಾಹುಲ್ ಗಾಂಧಿ ಪಕ್ಷದ ಮುಖ್ಯಸ್ಥರಾಗಲು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ; ಗೆಹ್ಲೋಟ್ ಭೇಟಿಯಾದ ತರೂರ್!
ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಭಾನುವಾರ ಇಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಪಕ್ಷದ ಭವಿಷ್ಯ ಹಾಗೂ ಮುಂಬರುವ ಎಐಸಿಸಿ ಅಧ್ಯಕ್ಷ ಚುನಾವಣೆ ಕುರಿತು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಚಿಂತನೆ: ಸಂದರ್ಶನದಲ್ಲಿ ಮಾಜಿ ಸಚಿವ ಕೃಷ್ಣ ಬೈರೇಗೌಡ
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದಾದ್ಯಂತ ಚುನಾವಣೆ ನಡೆಸಲು ಚಿಂತನೆಗಳು ನಡೆಯುತ್ತಿವೆ ಎಂದು ಎಐಸಿಸಿ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಸದಸ್ಯ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

