Air India

ಏರ್ ಇಂಡಿಯಾ ಸಿಬ್ಬಂದಿಗೆ ಮನೀಶ್ ಮಲ್ಹೋತ್ರಾ ವಿನ್ಯಾಸದ ಹೊಸ ಸಮವಸ್ತ್ರ! ವಿಡಿಯೋ
ಖಾಸಗಿ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮಂಗಳವಾರ ತನ್ನ ಕ್ಯಾಬಿನ್ ಮತ್ತು ಕಾಕ್‌ಪಿಟ್ ಸಿಬ್ಬಂದಿಗೆ ಮನೀಶ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ಹೊಸ ಸಮವಸ್ತ್ರಗಳ ಸಂಗ್ರಹವನ್ನು ಅನಾವರಣಗೊಳಿಸಿದೆ.

'ಪ್ರತಿ ಬೆದರಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ': ಖಲಿಸ್ತಾನಿ ಉಗ್ರನ ವೀಡಿಯೊ ಕುರಿತು ಕೆನಡಾ ಪ್ರತಿಕ್ರಿಯೆ
ಏರ್ ಇಂಡಿಯಾ ವಿಮಾನವನ್ನು ಹಾರಾಟ ನಡೆಸದಂತೆ ಸ್ಫೋಟಿಸುತ್ತೇವೆ ಎಂಬ ಖಲಿಸ್ತಾನಿ ಉಗ್ರನ ಬೆದರಿಕೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆನಡಾ ಸರ್ಕಾರ, ಪ್ರತಿ ಬೆದರಿಕೆಯನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳಿದೆ.

ಪ್ರಯಾಣಿಕರಿಗೆ ಅನಾನುಕೂಲ: ಮತ್ತೆ ಏರ್ ಇಂಡಿಯಾಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ ಡಿಜಿಸಿಎ
ಪ್ರಯಾಣಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಸಂಬಂಧ ಮಾನದಂಡಗಳನ್ನು ಅನುಸರಿಸದ ಏರ್ ಇಂಡಿಯಾಕ್ಕೆ ವಿಮಾನಯಾನ ವಲಯದ ನಿಯಂತ್ರಕ (ಡಿಜಿಸಿಎ) 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

Air India ವಿಮಾನದಲ್ಲಿ ಮಹಿಳಾ ಪ್ರಯಾಣಿಕೆಗೆ ಮೂರ್ಛೆ ರೋಗ; ಬೆಂಗಳೂರು ವೈದ್ಯರ ಸಮಯ ಪ್ರಜ್ಞೆಯಿಂದ ತಪ್ಪಿದ ಅಪಾಯ!
ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಾರ್ಗ ಮಧ್ಯೆ ಮಹಿಳಾ ಪ್ರಯಾಣಿಕೆಗೆ ಮೂರ್ಛೆ ರೋಗ ಕಾಣಿಸಿಕೊಂಡಿದ್ದು, ವಿಮಾನದಲ್ಲಿದ್ದ ಬೆಂಗಳೂರು ಮೂಲದ ವೈದ್ಯರೊಬ್ಬರು ಆಕೆಗೆ ಚಿಕಿತ್ಸೆ ನೀಡುವ ಮೂಲಕ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಿದ್ದಾರೆ.

ಏರ್ ಇಂಡಿಯಾಗೆ ಡಿಜಿಸಿಎ 10 ಲಕ್ಷ ರೂಪಾಯಿ ದಂಡ!
ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಮಂಗಳವಾರ ಪ್ರಯಾಣಿಕರ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಟಾಟಾ ಒಡೆತನದ ಏರ್ ಇಂಡಿಯಾಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಇಸ್ರೇಲ್-ಹಮಾಸ್ ಸಂಘರ್ಷ: ನವೆಂಬರ್ 30 ರವರೆಗೆ ಟೆಲ್ ಅವಿವ್ ಗೆ ವಿಮಾನ ರದ್ದುಗೊಳಿಸಿದ ಏರ್ ಇಂಡಿಯಾ
ಇಸ್ರೇಲ್ ಮತ್ತು ಹಮಾಸ್ ನಡುವೆ ಸಂಘರ್ಷ ಮುಂದುವರೆದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ನವೆಂಬರ್ 30 ರವರೆಗೆ ಟೆಲ್ ಅವಿವ್‌ಗೆ ನಿಗದಿತ ವಿಮಾನಗಳನ್ನು ರದ್ದುಗೊಳಿಸಿದೆ.

'ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ': ಖಲಿಸ್ತಾನಿ ಉಗ್ರನಿಂದ ವಿಮಾನ ಸ್ಫೋಟಿಸುವ ಬೆದರಿಕೆ
ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ.. ಒಂದು ವೇಳೆ ಅದರಲ್ಲಿ ಪ್ರಯಾಣಿಸಿದರೆ ಅವರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ, ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ ನೀಡಿದ್ದಾನೆ.

ಏರ್ ಇಂಡಿಯಾ COO ಆಗಿ ಕ್ಲಾಸ್ ಗೋರ್ಷ್ ನೇಮಕ
ಇತ್ತೀಚೆಗಷ್ಟೇ ಸರ್ಕಾರಿ ಸ್ವಾಮ್ಯದಿಂದ ಟಾಟಾ ತೆಕ್ಕೆಗೆ ಬಂದಿರುವ ಏರ್ ಇಂಡಿಯಾ ಸಂಸ್ಥೆ ಶುಕ್ರವಾರ ಕ್ಲಾಸ್ ಗೋರ್ಷ್ ಅವರನ್ನು ತನ್ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ನೇಮಕ ಮಾಡುವುದಾಗಿ ಘೋಷಿಸಿದೆ.

ನವೆಂಬರ್ 2 ರವರೆಗೆ ಟೆಲ್ ಅವಿವ್ ಗೆ ವಿಮಾನ ರದ್ದುಗೊಳಿಸಿದ ಏರ್ ಇಂಡಿಯಾ!
ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ನಿರಂತರ ಉದ್ವಿಗ್ನತೆಯ ಮಧ್ಯೆ ಏರ್ ಇಂಡಿಯಾ ನವೆಂಬರ್ 2 ರವರೆಗೆ ಟೆಲ್ ಅವೀವ್‌ಗೆ ವಿಮಾನಗಳನ್ನು ರದ್ದುಗೊಳಿಸಿದೆ.

