Ajit Pawar

ವಿಪಕ್ಷ ನಾಯಕ ಅಜಿತ್ ಪವಾರ್ ತಮ್ಮ ಸರ್ಕಾರ ಸೇರಿದ್ದರ ಬಗ್ಗೆ ಸಿಎಂ ಶಿಂಧೆ ಹೇಳಿದ್ದೇನು ಅಂದರೆ....
ಮಹಾರಾಷ್ಟ್ರದಲ್ಲಿ ಮತ್ತೋರ್ವ ಡಿಸಿಎಂ ಹುದ್ದೆ ಸೃಷ್ಟಿಯಾಗಿದ್ದು, ಎನ್ ಸಿಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಮಹಾರಾಷ್ಟ್ರ ರಾಜಕೀಯ: ಅಜಿತ್ ಪವಾರ್ ಸೇರಿದಂತೆ 9 ಶಾಸಕರ ವಿರುದ್ಧ ಎನ್ ಸಿಪಿ ಅನರ್ಹತೆ ಅರ್ಜಿ ಸಲ್ಲಿಕೆ
ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ ಮತ್ತು ಕೆಲ ಶಾಸಕರು ಪ್ರಮಾಣವಚನ ಸ್ವೀಕರಿಸಿ ಏಕನಾಥ್ ಶಿಂಧೆ ಸರ್ಕಾರ ಸೇರ್ಪಡೆಗೊಂಡ ನಂತರ ಬಿಕ್ಕಟ್ಟಿಗೆ ಸಿಲುಕಿದ ಎನ್ ಸಿಪಿ, ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಅನರ್ಹತೆ ಅರ್ಜಿಯನ್ನು ಸಲ್ಲಿಸಿದೆ.

ಶಿವಸೇನೆ ಜೊತೆ ಸೇರಬಹುದಾದರೆ, ಬಿಜೆಪಿ ಜೊತೆಗೂ ಸೇರಬಹುದು, ಪ್ರಧಾನಿ ಮೋದಿ ಅಭಿವೃದ್ಧಿ ಕೆಲಸ ಉತ್ತಮವಾಗಿದೆ: ಅಜಿತ್ ಪವಾರ್
ಮಹಾರಾಷ್ಟ್ರದಲ್ಲಿ ಭಾನುವಾರ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವವನ್ನು ಶ್ಲಾಘಿಸಿದ್ದು, ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶವು ಪ್ರಗತಿ ಹೊಂದುತ್ತಿದೆ, ಅಭಿವೃದ್ಧಿ ಬೆಂಬಲಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಎನ್‌ಸಿಪಿ ಬಿಕ್ಕಟ್ಟು: ಅಜಿತ್ ಪವಾರ್ ಬದಲಿಗೆ ಎನ್‌ಸಿಪಿ ವಿರೋಧ ಪಕ್ಷದ ನಾಯಕನಾಗಿ ಜಿತೇಂದ್ರ ಅವದ್ ನೇಮಕ
ಅಜಿತ್ ಪವಾರ್ ಅವರು ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ) ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪಕ್ಷದ ಶಾಸಕ ಜಿತೇಂದ್ರ ಅವದ್ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದೆ.

ಅಜಿತ್ ಪವಾರ್ ಕರೆದಿದ್ದ ಸಭೆ ಬಗ್ಗೆ ನನಗೆ ಗೊತ್ತಿರಲಿಲ್ಲ: ಶರದ್ ಪವಾರ್
ಅಜಿತ್ ಪವಾರ್ ಅವರು ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಮುಖಂಡರು ಮತ್ತು ಶಾಸಕರ ಸಭೆಯನ್ನು ಕರೆದಿದ್ದರು. ಆದರೆ, ಪುಣೆಯಲ್ಲಿದ್ದ ಪಕ್ಷದ ಅಧ್ಯಕ್ಷ ಶರದ್ ಪವಾರ್, ನನಗೆ ಈ ಸಭೆ ಬಗ್ಗೆ ಗೊತ್ತೇ ಇರಲಿಲ್ಲ ಎಂದಿದ್ದಾರೆ.

ಮಹಾರಾಷ್ಟ್ರ: ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ! ಈ ಸರ್ಕಸ್ ಹೆಚ್ಚು ಕಾಲ ಉಳಿಯುವುದಿಲ್ಲ- ಸಂಜಯ್ ರಾವತ್
ಭಾನುವಾರ ಮಹಾರಾಷ್ಟ್ರ ರಾಜಕೀಯದಲ್ಲಾದ ದಿಢೀರ್ ಬೆಳವಣಿಗೆಯಲ್ಲಿ ಎನ್ ಸಿಪಿ ಮುಖಂಡ ಅಜಿತ್ ಪವಾರ್ ತಮ್ಮ ಹಲವು ಸಹೋದ್ಯೋಗಿಗಳೊಂದಿಗೆ ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎನ್‌ಡಿಎ ಸೇರಿದ ಎನ್‌ಸಿಪಿ: ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ!
ಮಹಾರಾಷ್ಟ್ರದ ರಾಜಕೀಯದಲ್ಲಿ ಒಮ್ಮೆಲೇ ಸಂಚಲನ ಮೂಡಿದೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಬಂಡಾಯವೆದ್ದು ಹಲವಾರು ಶಾಸಕರೊಂದಿಗೆ ಶಿಂಧೆ ಸರ್ಕಾರವನ್ನು ಸೇರಿದ್ದಾರೆ.

ವಿರೋಧ ಪಕ್ಷದ ನಾಯಕನ ಸ್ಥಾನದಿಂದ ಮುಕ್ತಗೊಳಿಸಿ; ನನಗೆ ಪಕ್ಷದಲ್ಲಿ ಹೊಸ ಹುದ್ದೆ ನೀಡಿ: ಅಜಿತ್ ಪವಾರ್
ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಜವಾಬ್ದಾರಿಯಿಂದ ತಮ್ಮನ್ನು ಮುಕ್ತಗೊಳಿಸಬೇಕು ಮತ್ತು ಪಕ್ಷ ಸಂಘಟನೆಯಲ್ಲಿ ಯಾವುದಾದರೂ ಪಾತ್ರವನ್ನು ನೀಡಬೇಕು ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಜಿತ್ ಪವಾರ್ ಬುಧವಾರ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದ ಬಗ್ಗೆ ಯೋಚಿಸಲು ಶರದ್ ಪವಾರ್ ಗೆ 2-3 ದಿನ ಬೇಕು: ಅಜಿತ್
ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಘೋಷಣೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಶರದ್ ಪವಾರ್ ಅವರು ಇಂದು ತಮ್ಮ ನಿರ್ಧಾರವನ್ನು 'ಆಲೋಚಿಸಲು' ಎರಡರಿಂದ ಮೂರು ದಿನಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ.

