ದೇಶಮುಖ್ಯ ಕಾರ್ಯದರ್ಶಿ ಕಳುಹಿಸಲಾಗದು: ವರ್ಗಾವಣೆ ಆದೇಶ ಹಿಂಪಡೆಯುವಂತೆ ಪ್ರಧಾನಿಗೆ ಸಿಎಂ ಮಮತಾ ಬ್ಯಾನರ್ಜಿ ಮನವಿ
ಮುಖ್ಯ ಕಾರ್ಯದರ್ಶಿ ಅಲಪನ್ ಬಂಡೋಪಾಧ್ಯಾಯ ಅವರ ಸೇವೆ ಹಿಂಪಡೆಯುವಂತೆ ಕೇಂದ್ರ ಸರ್ಕಾರ ನೀಡಿರುವ ಆದೇಶವನ್ನು ಹಿಂಪಡೆಯಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಸಮಯದಲ್ಲಿ ಅವರನ್ನು ತಕ್ಷಣಕ್ಕೆ ಕಳುಹಿಸಿಕೊಡಲು ಸಾಧ್ಯವಿಲ್ಲ ಎಂದು ಕೂಡ ಮಮತಾ ಬ್ಯಾನರ್ಜಿ ಪಟ್ಟು ಹಿಡಿದಿದ್ದಾರೆ.