allegations

'ಟೈ ಧರಿಸಿಲ್ಲ' ಎಂದು 'ಕಾಲು ಮುಟ್ಟಿ ಕ್ಷಮೆ ಕೇಳಿ ಅಂದ್ರು': ಮಾಜಿ ಉದ್ಯೋಗಿ ಆರೋಪ ತಳ್ಳಿ ಹಾಕಿದ IndiGo
ಟರ್ಮಿನಲ್ ಪರಿಶೀಲನೆ ವೇಳೆ ತಾವು ಯೂನಿಫಾರ್ಮ್ ಟೈ ಧರಿಸಲು ಮರೆತಿದ್ದಾಗಿ ಜಂಶೀದ್ ಒಪ್ಪಿಕೊಂಡಿದ್ದಾರೆ. ಆದರೆ, ಈ ಸಣ್ಣ ತಪ್ಪಿಗೆ ಹಿರಿಯ ಅಧಿಕಾರಿಯೊಬ್ಬರು ತನ್ನ ಸಹೋದ್ಯೋಗಿ ಹಾಗೂ ಸೂಪರ್‌ವೈಸರ್ ಕಾಲು ಹಿಡಿದು ಕ್ಷಮೆಯಾಚಿಸುವಂತೆ ಅಮಾನವೀಯ ರೀತಿಯಲ್ಲಿ ವರ್ತಿಸಿದ್ದರು.

ನಿಶಾಳ ತಾಯಿಗೆ ಡಿವೋರ್ಸ್ ಕೊಟ್ಟು 25 ವರ್ಷವಾಯ್ತು, ಆಕೆಗೂ ನನಗೂ ಯಾವುದೇ ಸಂಬಂಧವಿಲ್ಲ: ಶಾಸಕ ಯೋಗೇಶ್ವರ್
ವೈಯಕ್ತಿಕ ಕಾರಣದಿಂದ ಈ ಬಾರಿ ಹಬ್ಬ ಮಾಡಿರ್ಲಿಲ್ಲ. ಈ ವಿಚಾರ ನಿಶಾಳಿಗೆ ಗೊತ್ತಿದ್ದೂ ಈ ರೀತಿ ಮಾಡಿದಳೋ ಅಥವಾ ಗೊತ್ತಿಲ್ಲದೆ ಮಾಡಿದ್ಲೋ ಗೊತ್ತಿಲ್ಲ. ಈ ವಿಚಾರ ಸಾರ್ವಜನಿಕ ವಲಯದಲ್ಲಿ ನಾನು ಮಕ್ಕಳನ್ನ ನೋಡಿಯೇ ಕೊಂಡಿಲ್ಲ ಎನ್ನುವಂತೆ ಬಿಂಬಿತವಾಗಿದೆ.

ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ! ಪ್ರಿಯಾಂಕ್ ಖರ್ಗೆ ಕಿಡಿ
ಬಿಜೆಪಿ ಕಚೇರಿಯ ಮೂಲೆಯಲ್ಲಿ ಗುಜರಿಯ ತೂಕಕ್ಕೆ ಹಾಕಲು ಇಟ್ಟಿದ್ದ ಯಾವುದೋ ಪೇಪರ್ ಬಂಡಲ್ ನ್ನು ಮುಂದೆ ಇಟ್ಟುಕೊಂಡು ತರ್ಕವಿಲ್ಲದ, ಹುರುಳಿಲ್ಲದ, ಮತ್ತು ಸತ್ಯಾಂಶವಿಲ್ಲದ ಆರೋಪಗಳನ್ನು ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

India 'Proxy war': ಪಾಕಿಸ್ತಾನದ ಆರೋಪಕ್ಕೆ ಅಪ್ಘಾನಿಸ್ತಾನ ತಿರುಗೇಟು! ಹೇಳಿದ್ದೇನು? Video
ನಾವು ಸ್ವತಂತ್ರ ರಾಷ್ಟ್ರವಾಗಿ ಭಾರತದೊಂದಿಗೆ ಸಂಬಂಧವನ್ನು ನಿರ್ವಹಿಸುತ್ತೇವೆ. ನಮ್ಮ ರಾಷ್ಟ್ರೀಯ ಹಿತಾಸಕ್ತಿಗಳ ಚೌಕಟ್ಟಿನೊಳಗೆ ಆ ಸಂಬಂಧಗಳನ್ನು ಬಲಪಡಿಸುತ್ತೇವೆ ಎಂದು ಮುಜಾಹಿದ್ ಅಲ್ ಜಜೀರಾಗೆ ತಿಳಿಸಿದರು.

Online ನಲ್ಲಿ ಮತ ಅಳಿಸಲು ಸಾಧ್ಯವಿಲ್ಲ, ರಾಹುಲ್ ಗಾಂಧಿ ಮತಗಳ್ಳತನ ಆರೋಪ ಆಧಾರರಹಿತ: ಚುನಾವಣಾ ಆಯೋಗ
ರಾಹುಲ್ ಗಾಂಧಿ ಮಾಡಿದ ಆರೋಪಗಳು ತಪ್ಪಾಗಿದ್ದು ಮತ್ತು ಆಧಾರರಹಿತವಾಗಿವೆ. ಯಾವುದೇ ವ್ಯಕ್ತಿ ಆನ್‌ಲೈನ್‌ನಲ್ಲಿ ಯಾವುದೇ ಮತವನ್ನು ಅಳಿಸಲು ಸಾಧ್ಯವಿಲ್ಲ.

ಚುನಾವಣೆ ಕಳ್ಳಾಟ ಆರೋಪ: ಕಾಂಗ್ರೆಸ್-BJP ನಡುವೆ ವಾಕ್ಸಮರ
ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ.

ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್ ಯತ್ನ: ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಸರ್ಕಾರಕ್ಕೆ CID ವರದಿ
ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು, ಹನಿಟ್ರ್ಯಾಪ್ ಪ್ರಯತ್ನಗಳ ಕುರಿತು ಸಚಿವರ ಹೇಳಿಕೆಗಳನ್ನು ಬೆಂಬಲಿಸಲು ಯಾವುದೇ ಗಣನೀಯ ಪುರಾವೆಗಳು ಸಿಕ್ಕಿಲ್ಲ ಎಂದು ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ: ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್
ಸರ್ಫರಾಜ್ ಖಾನ್ ಜೊತೆಗೆ ದೂರವಾಣಿ ಮೂಲಕ ನಾನು ಹೇಳಿದ್ದೆಲ್ಲವೂ ಸತ್ಯ. ಆಡಿಯೋದಲ್ಲಿರುವ ಧ್ವನಿ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ.

ಆಹಾರ-ಮೂಲಭೂತ ಸೌಕರ್ಯ ನೀಡಲು ಲಂಚಕ್ಕೆ ಆಗ್ರಹ, ಕೈದಿ ಮೇಲೆ ಹಲ್ಲೆ: ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ವಿರುದ್ಧ ದೂರು ದಾಖಲು
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ನಿವಾಸಿ ಬಾನು ಎಂಬುವವರು ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಸೋಮವಾರ ದೂರು ನೀಡಿದ್ದು, ತಮ್ಮ ಒಬ್ಬನೇ ಮಗನ ರಕ್ಷಿಸುವಂತೆ ಮನವಿ ಮಾಡಿದ್ದಾರೆ.

