alliance

ಜಮ್ಮು-ಕಾಶ್ಮೀರ ಚುನಾವಣೆ: ಕಾಂಗ್ರೆಸ್-ಎನ್‌ಸಿ ಮೈತ್ರಿ ಬಹುತೇಕ ಅಂತಿಮ
90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ವಿಧಾನ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ: ಬಿ ಎಸ್ ಯಡಿಯೂರಪ್ಪ
ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ವಿಲೀನವೊ… ವಿಚ್ಛೇದನವೋ..? ಕುಮಾರಸ್ವಾಮಿ ತೊಳಲಾಟ! (ಸುದ್ದಿ ವಿಶ್ಲೇಷಣೆ)
ವಿಲೀನ ಅಥವಾ ವಿಚ್ಛೇದನ…. ಯಾವುದು ಲಾಭ? ಯಾವುದು ನಷ್ಟ? ಇಡೀ ದೇಶದಲ್ಲಿ ಸದ್ದು ಮಾಡಿರುವ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ನಂತರ ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ತಲೆದೋರಿರುವ ಗೊಂದಲ ಇದು.

ಪ್ರಜ್ವಲ್ ಲೈಂಗಿಕ ಹಗರಣ: ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು? MLC ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ?
ಪರಿಷತ್ತು, ಜಿಪಂ/ ತಾಪಂ, ಬಿಬಿಎಂಪಿ ಚುನಾವಣೆಗಳಿಗೆ ಮೈತ್ರಿ ಮುಂದುವರಿಯಲಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ಹೇಳಿಕೊಂಡಿದ್ದರೂ, ಲೈಂಗಿಕ ಹಗರಣವು ಕೇಸರಿ ಪಕ್ಷದ ನಾಯಕರನ್ನು ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮರುಚಿಂತನೆ ನಡೆಸುವಂತೆ ಮಾಡಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್-ಬಿಜೆಪಿ ಮೈತ್ರಿಗೆ ತೊಂದರೆಯಿಲ್ಲ- ಪ್ರಹ್ಲಾದ್ ಜೋಶಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜೆಡಿಎಸ್- ಬಿಜೆಪಿ ಮೈತ್ರಿಗೆ ಯಾವುದೇ ತೊಂದರೆಯಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ನಂತರವೂ ಮೈತ್ರಿ ಮುಂದುವರಿಯಲಿದೆ: ಬಿ.ಎಸ್ ಯಡಿಯೂರಪ್ಪ
ರಾಜ್ಯದಲ್ಲಿ ಬಿಜೆಪಿ– ಜೆಡಿಎಸ್ ಪಕ್ಷಗಳು ಒಂದಾಗಿ ಹೋಗಬೇಕು. ಈ ಹೊಂದಾಣಿಕೆ ಈ ಚುನಾವಣೆಗೆ ಸೀಮಿತವಲ್ಲ. ಮೈತ್ರಿ ಮುಂದುವರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ.

ಲೋಕಸಭಾ ಚುನಾವಣೆ: ಬಿಜೆಪಿ ಜೊತೆಗೆ ಮೈತ್ರಿ, 17 ಸ್ಥಾನಗಳಲ್ಲಿ ಟಿಡಿಪಿ ಸ್ಪರ್ಧೆ
ಮುಂಬರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗೆ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡುಅವರ ನಡುವೆ ಮಾತುಕತೆ ನಡೆದಿದೆ.

ಲೋಕಸಭೆ ಚುನಾವಣೆ: ಬಿಜೆಪಿಯ ಸೀಟು ಹಂಚಿಕೆ ಪ್ಲಾನ್ ಗೆ ಮಹಾರಾಷ್ಟ್ರ ಮಿತ್ರಪಕ್ಷಗಳ ಬೇಸರ!
ಸೂತ್ರದ ಪ್ರಕಾರ, ರಾಜ್ಯದ ಒಟ್ಟು 48 ಸ್ಥಾನಗಳ ಪೈಕಿ 36 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು, ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಕ್ರಮವಾಗಿ ಎಂಟು ಮತ್ತು ನಾಲ್ಕು ಸ್ಥಾನಗಳಿಂದ ಕಣಕ್ಕೆ ಇಳಿಯಲಿವೆ.

ಲೋಕ ಸಮರಕ್ಕೆ 'ಮಹಾ' ಒಪ್ಪಂದ: ಉದ್ಧವ್ 20, ಕಾಂಗ್ರೆಸ್ 18 ಮತ್ತು ಶರದ್ ಪವಾರ್ ಗೆ 10 ಕ್ಷೇತ್ರ?
ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಿಗೆ ಮಹಾರಾಷ್ಟ್ರ ವಿರೋಧ ಪಕ್ಷದ ಮೈತ್ರಿಕೂಟದ ಮಹಾ ವಿಕಾಸ್ ಅಘಾಡಿ (ಎಂವಿಎ) ಸೀಟು ಹಂಚಿಕೆಯ ಮಾತುಕತೆ ಪೂರ್ಣಗೊಳಿಸಿದೆ ಎಂದು ವರದಿಯಾಗಿದೆ.

