alliance

ಮೈತ್ರಿಯಿಂದಾಗಿ ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್'ನತ್ತ ಮುಖ ಮಾಡುತ್ತಿದ್ದಾರೆ: ಡಿಕೆ.ಶಿವಕುಮಾರ್
ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ತಪ್ಪು ಸಂದೇಶವನ್ನು ಜೆಡಿಎಸ್-ಬಿಜೆಪಿ ಮೈತ್ರಿಕೂಟ ರವಾನಿಸಿದೆ' ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದರು.

ಬಿಜೆಪಿ ಜೊತೆಗಿನ ಮೈತ್ರಿ ತಂದಿಟ್ಟ ಸಂಕಷ್ಟ: ಮತ್ತಷ್ಟು ಮುಸ್ಲಿಂ ನಾಯಕರು ಜೆಡಿಎಸ್ ತೊರೆಯಲು ನಿರ್ಧಾರ?
ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ.

ಜೆಡಿಎಸ್-ಬಿಜೆಪಿ ಮೈತ್ರಿ: ಸ್ಥಳೀಯ ನಾಯಕರ ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಪ್ರತಿಷ್ಠೆ ಎಂಬುದು ಸಮಸ್ಯೆಯಾವುದಿಲ್ಲ- ಎಚ್‌ಡಿ.ಕುಮಾರಸ್ವಾಮಿ
2024ರ ಲೋಕಸಭೆ ಚುನಾವಣೆಗೆ ಎರಡು ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಮೊದಲು ಸ್ಥಳೀಯ ಬಿಜೆಪಿ ಮತ್ತು ಜೆಡಿಎಸ್ ನಾಯಕತ್ವವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಜೆಡಿಎಸ್ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಹೇಳಿದರು.

ಅಗೋಚರ ಸರ್ವಾಧಿಕಾರಿ ಸಂತೋಷ್ ವಿರುದ್ಧ ವಾಗ್ದಾಳಿ ನಡೆಸಿದ್ದ ಎಚ್ ಡಿಕೆಯನ್ನು ಬಿಜೆಪಿ ಕ್ಷಮಿಸಿಬಿಟ್ಟಿತೇ? ಕುಟುಂಬದ ಹಿತವೇ ಮುಖ್ಯವಾಯ್ತೇ?
ಬಿಜೆಪಿ ಸಂವಿಧಾನದ ಪೀಠಿಕೆಯಿಂದ ಜಾತ್ಯಾತೀತತೆಯನ್ನು ಕಿತ್ತು ಹಾಕಿದೆ. ಜೆಡಿಎಸ್ ತನ್ನ ಹೆಸರಿನಲ್ಲಿದ್ದ ಜಾತ್ಯಾತೀತತೆಯನ್ನು ಅನಧಿಕೃತವಾಗಿ ಕಿತ್ತು ಹಾಕಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಜೆಡಿಎಸ್ 'ಕೂಡಿಕೆ'ಯ ಹವಣಿಕೆ; ಗೌಡರ ಜಾತ್ಯಾತೀತ ವರ್ಚಸ್ಸಿಗೆ ಧಕ್ಕೆ; ರಾಜಕೀಯ ತಜ್ಞರ ಅಭಿಮತವೇನು?
ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ವರಿಷ್ಠರು ನಿರ್ಧರಿಸಿದ್ದಾರೆ, ಆದರೆ ಈ ಮೈತ್ರಿಯಿಂದ ದೇವೇಗೌಡರ ದೀರ್ಘಕಾಲದ ಜಾತ್ಯಾತೀತ ವರ್ಚಸ್ಸಿಗೆ ಧಕ್ಕೆ ಬರಲಿದೆ ಎಂಬುದು ರಾಜಕೀಯ ತಜ್ಞರ ಅಭಿಪ್ರಾಯ.

ಗಂಗೆಯಲ್ಲಿ ಮಿಂದರೆ ಕಾಗೆ ಕೋಗಿಲೆ ಆಗುತ್ತದೆಯೇ? ಕಾಮಾಲೆ ಕಣ್ಣಿನ ಕಾಂಗ್ರೆಸ್ ಅಂಗೈಯಲ್ಲಿ ಕೇಶವೇಕೆ ಬೆಳೆಯುತ್ತಿಲ್ಲವೆಂದು ಕೈಕೈ ಉಜ್ಜಿಕೊಳ್ಳುತ್ತಿದೆಯಾ?
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಣಿಯಾಗಿರುವ ಜಾತ್ಯತೀತ ಜನತಾದಳ ಇದೀಗ ತನ್ನನ್ನು ಅಣಕಿಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.

ಬಿಜೆಪಿ ಜೊತೆ ಮಾತುಕತೆಗಾಗಿ ದೆಹಲಿಯಲ್ಲಿ ದೇವೇಗೌಡ ಕುಟುಂಬ: ಜೆಡಿಎಸ್ ಪ್ರಮುಖರನ್ನು ಹೊರಗಿಟ್ಟು ಚರ್ಚೆ!
ಭಾರತೀಯ ಜನತಾ ಪಕ್ಷ-ಜನತಾ ದಳ ಜಾತ್ಯತೀತ ಮೈತ್ರಿ ಕುರಿತು ಶೀಘ್ರದಲ್ಲೇ ಅಂತಿಮ ನಿರ್ಧಾರವನ್ನು ನಿರೀಕ್ಷಿಸಲಾಗಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

ನನ್ನ ಮನೆಗೆ ಕಲ್ಲೆಸೆದವರೊಂದಿಗೆ ಚೆನ್ನಾಗಿರಲು ಹೇಗೆ ಸಾಧ್ಯ? ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಜೀತ ಮಾಡಲು ಸಿದ್ದರಿಲ್ಲ; ಪ್ರೀತಂ ಗೌಡ
ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಣ್ಣ ಜಿಲ್ಲೆಯಲ್ಲಿ ಒಕ್ಕಲಿಗ ನಾಯಕರು ಬೆಳೆಯಬಾರದು, ಪ್ರೀತಂ ಜೆ. ಗೌಡ ಬೆಳೆಯಬಾರದು ಎಂದು ವಿಧಾನಸಭಾ ಚುನಾವಣೆಯಲ್ಲಿ ತನ್ನ ವಿರುದ್ಧ ಪ್ರಚಾರ ಮಾಡಿದ್ದರು. ಜೆಡಿಎಸ್‌ನವರು ನನ್ನ ಮನೆಗೆ ಕಲ್ಲು ಹೊಡೆದರು. ಈಗ ಅವರೊಂದಿಗೆ ಚೆನ್ನಾಗಿರಲು ಹೇಗೆ ಸಾಧ್ಯ ಎಂದು ಪ್ರೀತಂಗೌಡ ಪ್ರಶ್ನಿಸಿದರು.

ಆಂಧ್ರ ಪ್ರದೇಶ ಚುನಾವಣೆ: ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ- ಪವನ್ ಕಲ್ಯಾಣ್
ಮುಂಬರುವ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿಯೊಂದಿಗೆ ಜನಸೇನಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಹೇಳಿದ್ದಾರೆ.

