alliance

2024 ಲೋಕಸಭಾ ಚುನಾವಣೆ: ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಕುರಿತು ಅಡ್ಡಗೋಡೆ ಮೇಲೆ ದೀಪ ಇಟ್ಟ ಹೆಚ್.ಡಿ. ದೇವೇಗೌಡ!
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತುಗಳ ಕುರಿತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ.

ಬಿಜೆಪಿ, ಜೆಡಿಎಸ್ ಕೈ ಜೋಡಿಸಿದರೆ ಆಗೋದು ಕೇವಲ 85 ಸ್ಥಾನ ಅಷ್ಟೇ; ಆಪರೇಷನ್ ಮಾತೆಲ್ಲಿ: ಡಿಕೆಶಿಗೆ ಸಿಎಂ ಇಬ್ರಾಹಿಂ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತ ಊಹಾಪೋಹಗಳು ಇತ್ತೀಚಿಗೆ ಹರಿದಾಡುತ್ತಿವೆ. ಅದಕ್ಕೆ ಪುಷ್ಟಿ ನೀಡುವಂತಹ ಕೆಲವೊಂದಿಷ್ಟು ವಿದ್ಯಮಾನಗಳು ಕೂಡಾ ಮೊದಲ ಅಧಿವೇಶನ ಸಂದರ್ಭದಲ್ಲಿ ನಡೆದಿದ್ದು, ರಾಜಕಾರಣದಲ್ಲಿ ಯಾರು ಶಾಶ್ವತ ಶತ್ರುಗಳು ಇಲ್ಲ. ಮಿತ್ರರೂ ಅಲ್ಲ ಎಂಬುದು ಸಾಬೀತಾಗಿದೆ.

ಬಿಜೆಪಿ ಸಖ್ಯಕ್ಕೆ ಜೆಡಿಎಸ್ 'ಒಡೆದ ಮನೆ': ಮೈತ್ರಿಗೆ ಎಚ್.ಡಿ ರೇವಣ್ಣ ವಿರೋಧ; ಎತ್ತು ಏರಿಗೆ, ಕೋಣ ನೀರಿಗೆ!
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಗೆ ಹಲವು ಜೆಡಿಎಸ್ ಶಾಸಕರು ವಿರೋಧ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಜೆಡಿಎಸ್ ಉನ್ನತ ನಾಯಕರು ಗೊಂದಲಕ್ಕೊಳಗಾಗಿದ್ದಾರೆ.

ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್.. ನಾಗವಲ್ಲಿಯ ತರ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಕುರಿತ ಮಾತುಗಳು ಹಲವು ದಿನಗಳಿಂದ ಓಡಾಡುತ್ತಿವೆ. ಕಳೆದ ಬಾರಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಈ ಬಾರಿ ಬಿಜೆಪಿಯೊಂದಿಗೆ ಸ್ನೇಹ ಬೆಳೆಸಲಿದೆ ಎನ್ನಲಾಗುತ್ತಿದೆ.

ತಮ್ಮ ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ದೇಶದ ಹೆಸರನ್ನು ಬಳಸಿಕೊಳ್ಳುತ್ತಿವೆ: ಚುನಾವಣಾ ಆಯೋಗಕ್ಕೆ ಬಿಜೆಪಿ ನಾಯಕ ದೂರು
ಭಾರತೀಯ ಜನತಾ ಪಕ್ಷದ ನಾಯಕ ಅಶುತೋಷ್ ದುಬೆ ಮಂಗಳವಾರ ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದು ವಿರೋಧ ಪಕ್ಷಗಳ ಮೈತ್ರಿಗೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (ಇಂಡಿಯಾ) ಎಂದು ಹೆಸರಿಟ್ಟಿರುವುದರ ವಿರುದ್ಧ ಚುನಾವಣಾ ಆಯೋಗ ಮೊರೆ ಹೋಗಿದ್ದಾರೆ.

ಕುಮಾರಸ್ವಾಮಿ ಹೇಳಿದ್ದು ನಿಜ, ಭವಿಷ್ಯದಲ್ಲಿ ನಾವು ಒಟ್ಟಾಗಿ ಹೋರಾಡುತ್ತೇವೆ: ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಯಡಿಯೂರಪ್ಪ ಸುಳಿವು?
2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹ ದಟ್ಟವಾಗಿದ್ದು ಇಂದು ಮಾಜಿ ಸಿಎಂ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪನವರ ಮಾತುಗಳು ಇದಕ್ಕೆ ಪುಷ್ಠಿ ನೀಡುತ್ತಿವೆ.

ಅತಂತ್ರ ವಿಧಾನಸಭೆ ಸುಳಿವು: ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ ಎಂದ ಹೆಚ್'ಡಿ. ಕುಮಾರಸ್ವಾಮಿ
ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಾವು ಸಿದ್ಧ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್'ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.

ಗುಜರಾತ್ ಚುನಾವಣೆ: ಕೈ ಜೊತೆ ಮೈತ್ರಿ ಮಾಡಿಕೊಂಡ ಎನ್ ಸಿಪಿಗೆ 3 ಸೀಟು
ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಮತ್ತು ಎನ್ ಸಿಪಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ. ಇದರಿಂದಾಗಿ ರಾಜ್ಯದ ಒಟ್ಟು 182 ಸ್ಥಾನಗಳ ಪೈಕಿ 3 ಕ್ಷೇತ್ರಗಳಲ್ಲಿ ಎನ್ ಸಿಪಿ ಸ್ಪರ್ಧಿಸಲಿದೆ. ಉಭಯ ಪಕ್ಷಗಳ ಮುಖಂಡರು ಶುಕ್ರವಾರ ಇದನ್ನು ಪ್ರಕಟಿಸಿದ್ದಾರೆ.

2023 ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿಯ ಅಗತ್ಯವಿರಲ್ಲ: ರಾಹುಲ್ ಗಾಂಧಿ
ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಜೊತೆಗಿನ ಮೈತ್ರಿ ಅವಕಾಶವನ್ನು ತಳ್ಳಿಹಾಕಿದರು.

