ambulance

ಕಾರವಾರ: ಸಕಾಲಕ್ಕೆ ಸಿಗದ ಆ್ಯಂಬುಲೆನ್ಸ್, ಮೂರು ತಿಂಗಳ ಮಗು ಸಾವು
ಸೂಕ್ತ ಸಮಯಕ್ಕೆ ಆ್ಯಂಬುಲೆನ್ಸ್ ಸಿಗದ ಕಾರಣ ಮೂರು ತಿಂಗಳ ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಕಾರವಾರದ ಕಿನ್ನಾರ ಗ್ರಾಮದಲ್ಲಿ ನಡೆದಿದೆ.

ಚಾಲಕ ಜಗದೀಶ್ ಹೊತ್ತೊಯ್ಯುತ್ತಿದ್ದ ಆ್ಯಂಬುಲೆನ್ಸ್ ತಡೆದ ಜೆಡಿಎಸ್ ಮಾಜಿ ಶಾಸಕ: ಸಿಸಿಟಿವಿ ದೃಶ್ಯಾವಳಿಗಳಿಂದ ಬಹಿರಂಗ!
ಆತ್ಮಹತ್ಯೆಗೆ ಯತ್ನಿಸಿದ್ದ, ಸಾರಿಗೆ ಸಂಸ್ಥೆಯ ನಾಗಮಂಗಲ ಡಿಪೊ ಚಾಲಕ ಎಚ್.ಆರ್.ಜಗದೀಶ್ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಜೆಡಿಎಸ್ ಮುಖಂಡ, ಮಾಜಿ ಶಾಸಕ ಸುರೇಶ್‌ಗೌಡ ಅವರು, ಆಂಬುಲೆನ್ಸ್ ತಡೆದಿದ್ದಾರೆ ಎನ್ನಲಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಶೀಘ್ರದಲ್ಲೆ ವೇತನ ಪಾವತಿಸಿ ಇಲ್ಲಾ ಮುಷ್ಕರ ಎದುರಿಸಿ; ಸರ್ಕಾರಕ್ಕೆ 108 ಆ್ಯಂಬುಲೆನ್ಸ್ ಸಿಬ್ಬಂದಿ ಎಚ್ಚರಿಕೆ
ಆರೋಗ್ಯ ಕವಚ 108 ಆ್ಯಂಬುಲೆನ್ಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಇದನ್ನು ವಿರೋಧಿಸಿ ಮತ್ತೆ ಹೋರಾಟ ನಡೆಸಲು ನೌಕರರು ಮುಂದಾಗಿದ್ದಾರೆ.

ಚಿತ್ರದುರ್ಗ: ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ ಡಿಕ್ಕಿ, ಮೂವರ ದಾರುಣ ಸಾವು
ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಆಂಬ್ಯುಲೆನ್ಸ್‌ಗೆ ಬೆಂಕಿ, 7 ವರ್ಷದ ಬಾಲಕ ಸೇರಿ ಮೂವರು ಸಜೀವ ದಹನ
ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಮತ್ತೊಂದು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಲಮ್ಸಾಂಗ್ ಪಿಎಸ್ ವ್ಯಾಪ್ತಿಯ ಇರೊಸೆಂಬಾದಲ್ಲಿ ಗುಂಪು ದಾಳಿ ನಡೆದಿದ್ದು, ಇದರ ಪರಿಣಾಮವಾಗಿ 7 ವರ್ಷದ ಮಗು ಸೇರಿ ಮೂವರು ವ್ಯಕ್ತಿಗಳು ಸಜೀವ ದಹನವಾಗಿದ್ದಾರೆ.

ಬೆಂಗಳೂರಿನ ಟ್ರಾಫಿಕ್ಗೆ ಮತ್ತೊಂದು ಬಲಿ: ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಕಂದಮ್ಮ ಸಾವು!
ಅಪಘಾತದಲ್ಲಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಹುದಾ ಕೌಸರ್ ನೆಲಮಂಗಲ ಬಳಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ಪಡೆಯಲಾಗದೆ ಮೃತಪಟ್ಟಿದೆ.

ಟ್ರಾಫಿಕ್ ಕಂಟ್ರೋಲ್ ರೂಮ್ ಸಂಖ್ಯೆಗಳನ್ನು ಆಸ್ಪತ್ರೆಗಳೊಂದಿಗೆ ಹಂಚಿಕೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಮೀಸಲಾದ ತುರ್ತು ಸಂಚಾರ ನಿಯಂತ್ರಣ ಕೊಠಡಿ ಸಂಖ್ಯೆಗಳನ್ನು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳೊಂದಿಗೆ ಹಂಚಿಕೊಳ್ಳಲು ಮತ್ತು ಆ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆ್ಯಂಬುಲೆನ್ಸ್ ಚಾಲಕರ ದತ್ತಾಂಶ ಪಡೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.

ಆಂಬ್ಯುಲೆನ್ಸ್ ಸಿಗದೆ ಮೃತ ಮಗುವನ್ನು ಬ್ಯಾಗ್‌ನಲ್ಲಿ ಹಾಕಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬೈಕ್‌ನಲ್ಲಿ ಬಂದ ವ್ಯಕ್ತಿ
ಆಂಬ್ಯುಲೆನ್ಸ್ ಸಿಗದ ಕಾರಣ ಬೈಕ್‌ಗೆ ಜೋಡಿಸಲಾದ ಬ್ಯಾಗ್‌ನಲ್ಲಿ ಮೃತಪಟ್ಟಿರುವ ನವಜಾತ ಶಿಶುವಿನೊಂದಿಗೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲಾಧಿಕಾರಿ ಕಚೇರಿಗೆ ವ್ಯಕ್ತಿಯೊಬ್ಬರು ಬಂದಿದ್ದು, ಈ ಘಟನೆಯನ್ನು ತನಿಖೆಗೆ ಆದೇಶಿಸಲಾಗಿದೆ.

ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಪ್ರಧಾನಿ ಬೆಂಗಾವಲು ಪಡೆ, 'ಇಪಿಐ'ಗೆ ಮೋದಿ ಮನ್ನಣೆ; ವಿಡಿಯೋ
ಪ್ರಧಾನಿ ಮೋದಿ ಅಹಮದಾಬಾದ್‌ನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ಪಡೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟಿದ್ದು, ಇದಕ್ಕಾಗಿ ಬೆಂಗಾವಲು ವಾಹನಗಳು ಸ್ವಲ್ಪ ಹೊತ್ತು ರಸ್ತೆಯಲ್ಲಿ ನಿಂತಿದ್ದವು.

