ರಾಜಕೀಯಲೋಕಸಭಾ ಚುನಾವಣೆಗೆ ಸಿದ್ಧತೆ: ಸನಾತನ ಧರ್ಮ ವಿವಾದವನ್ನೇ ಮಹಾ ಅಸ್ತ್ರವಾಗಿಸಿಕೊಂಡ ಬಿಜೆಪಿ, ಕಾಂಗ್ರೆಸ್'ಗೆ ತಿರುಗೇಟು ನೀಡಲು ಮುಂದು!
ಭಾರತೀಯ ಸನಾತನ ಧರ್ಮ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಪರ ವಿರೋಧ ಚರ್ಚೆಗಳು, ಖಂಡನೆ ಮುಂದುವರಿದಿದೆ. ಈ ವಿವಾದವನ್ನೇ ಮುಂಬರುವ ಲೋಕಸಭಾ ಚುನಾವಣೆಗೆ ಮಹಾ ಅಸ್ತ್ರವಾಗಿ ಪ್ರಯೋಗಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಇದರಂತೆ ಕಾಂಗ್ರೆಸ್ ವಿರುದ್ಧ ಸೆಣಸಾಟ ನಡೆಸಲು ಸಜ್ಜಾಗಿದೆ.