Amitabh Bachchan

'ಭಾರತ್ ಮಾತಾ ಕೀ ಜೈ' ಎಂದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!
ಕೇಂದ್ರ ಸರ್ಕಾರ ಇಂಡಿಯಾವನ್ನು ಭಾರತ್ ಎಂದು ಮರುನಾಮಕರಣ ಮಾಡುವ ಸಾಧ್ಯತೆ ಹೆಚ್ಚಾಗಿರುವಂತೆಯೇ, ಇದರ ಪರ ಹಾಗೂ ವಿರುದ್ಧವಾದ ಚರ್ಚೆಗಳು ಆರಂಭವಾಗಿವೆ. ಈ ನಡುವೆ ಬಾಲಿವುಡ್ ದಿಗ್ಗಜ ನಟ ಅಮಿತಾಬ್ ಬಚ್ಚನ್ ಅವರ ಟ್ವೀಟ್ ಎಲ್ಲಾ ಅಭಿಮಾನಿಗಳ ಕಣ್ಣುಗಳನ್ನು ಸೆಳೆದಿದೆ.

50ನೇ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು 'ಬಿಗ್ ಬಿ': ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಅಮಿತಾಬ್ ಬಚ್ಚನ್
ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು ಭಾನುವಾರ ತಮ್ಮ 50ನೇ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಮ್ಮ ಮತ್ತು ಪತ್ನಿ ಜಯಾ ಬಚ್ಚನ್ ಅವರಿಗೆ ಶುಭಾಶಯ ಕೋರಿದ್ದಕ್ಕಾಗಿ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

'ತೂ ಚೀಜ್ ಬಡಿ ಹೈ ಮಸ್ಕ್ ಮಸ್ಕ್': ಟ್ವಿಟರ್'ನಲ್ಲಿ ಬ್ಲ್ಯೂಟಿಕ್ ಮರು ಸ್ಥಾಪನೆ, ಎಲಾನ್ ಮಸ್ಕ್'ಗೆ ಅಮಿತಾಬ್ ಬಚ್ಚನ್ ಧನ್ಯವಾದ ಹೇಳಿದ್ದು ಹೀಗೆ....
ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬ್ಲ್ಯೂಟಿಕ್ ಮರುಸ್ಥಾಪನೆಗೊಂಡಿದ್ದು, ಇದಕ್ಕೆ ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಅವರಿಗೆ ವಿಶಿಷ್ಟ ರೀತಿಯಲ್ಲಿ ಧನ್ಯವಾದ ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಬಿಗ್ ಬಿ ಅಮಿತಾಬ್ ಬಚ್ಚನ್ ಮೊಮ್ಮಗಳು ಆರಾಧ್ಯ!
ಬಾಲಿವುಡ್ 'ಬಿಗ್ ಬಿ' ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು, ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಅವರ ಪುತ್ರಿಯೂ ಆಗಿರುವ 11 ವರ್ಷದ ಆರಾಧ್ಯಾ ಬಚ್ಚನ್ ಅವರು ದೆಹಲಿಯ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಐಶ್ವರ್ಯಾ ರೈ ಮಗಳ ಕುರಿತಾದ ಸುಳ್ಳು ಸುದ್ದಿ ಪ್ರಕಟಣೆಗೆ ಹೈಕೋರ್ಟ್ ನಿರ್ಬಂಧ; ವಿಡಿಯೋಗಳನ್ನು ತೆಗೆದುಹಾಕಲು ಗೂಗಲ್‌ಗೆ ನಿರ್ದೇಶನ
ನಟ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಅವರ ಆರೋಗ್ಯದ ಕುರಿತು ತಪ್ಪು ಮಾಹಿತಿಗಳನ್ನು ಪ್ರಕಟಿಸದಂತೆ ಹಲವಾರು ಯೂಟ್ಯೂಬ್ ಚಾನೆಲ್‌ಗಳನ್ನು ದೆಹಲಿ ಹೈಕೋರ್ಟ್ ಗುರುವಾರ ನಿರ್ಬಂಧಿಸಿದೆ. ಮಗುವಿನ ಬಗ್ಗೆ ತಪ್ಪು ಮಾಹಿತಿ ಹರಡುವುದು 'ಅಸ್ವಸ್ಥ ವಿಕೃತತೆಯನ್ನು' ತೋರಿಸುತ್ತದೆ ಎಂದೂ ಅದು ಹೇಳಿದೆ.

ಶೂಟಿಂಗ್ ವೇಳೆ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್'ಗೆ ಗಾಯ
ಪ್ರಾಜೆಕ್ಟ್ ಕೆ ಚಿತ್ರೀಕರಣದ ವೇಳೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ.

ಮುಂಬೈನಲ್ಲಿರುವ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಬಂಗಲೆಗಳನ್ನು ಸ್ಫೋಟಿಸುವುದಾಗಿ ಬೆದರಿಕೆ!
ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಮನೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯಿಂದ ನಾಗ್ಪುರ ಪೊಲೀಸ್ ನಿಯಂತ್ರಣಕ್ಕೆ ಅನಾಮಧೇಯ ಕರೆ ಬಂದಿದೆ.

'ಅನಾರೋಗ್ಯಕರ' ಬಿಸ್ಕೆಟ್ ಜಾಹೀರಾತು ಮಾಡಬೇಡಿ; ಬಾಲಿವುಡ್ ನಟ ಅಮಿತಾಬ್ ಬಚ್ಚನ್‌ಗೆ ತಜ್ಞರ ಸಲಹೆ
ಸ್ವತಂತ್ರ ವೈದ್ಯಕೀಯ ತಜ್ಞರು, ಶಿಶುವೈದ್ಯರು ಮತ್ತು ಪೌಷ್ಟಿಕತಜ್ಞರ ರಾಷ್ಟ್ರೀಯ ಚಿಂತಕರ ಚಾವಡಿಯಾದ ನ್ಯೂಟ್ರಿಷನ್ ಅಡ್ವೊಕಸಿ ಇನ್ ಪಬ್ಲಿಕ್ ಇಂಟರೆಸ್ಟ್-ಇಂಡಿಯಾ (NAPi), ಅನಾರೋಗ್ಯಕರ ಬಿಸ್ಕೆಟ್ ಬ್ರಾಂಡ್ ಅನ್ನು ಪ್ರಚಾರ ಮಾಡುವುದರ ವಿರುದ್ಧ ಬಾಲಿವುಡ್ ಐಕಾನ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ.

ಅನುಮತಿ ಇಲ್ಲದೆ ಅಮಿತಾಬ್ ಬಚ್ಚನ್ ಧ್ವನಿ, ಚಿತ್ರ ಬಳಸುವಂತಿಲ್ಲ: ದೆಹಲಿ ಹೈಕೋರ್ಟ್
ನಟ ಅಮಿತಾಭ್ ಬಚ್ಚನ್ ರ ಅನುಮತಿ ಇಲ್ಲದೇ ಅವರ ಧ್ವನಿ ಹಾಗೂ ಚಿತ್ರಗಳನ್ನು ಎಲ್ಲಿಯೂ ಬಳಕೆ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

