Amritpal Singh

ಜೈಲಿನಲ್ಲಿರುವ ಖಲಿಸ್ತಾನ್ ಬೆಂಬಲಿಗ, ಸಂಸದ ಅಮೃತಪಾಲ್ ಸಿಂಗ್ ಜನವರಿ 14ರಂದು ರಾಜಕೀಯ ಪಕ್ಷ ಸ್ಥಾಪನೆ!
ಪಂಜಾಬ್ ನಲ್ಲಿ ಅಕಾಲಿದಳ ದುರ್ಬಲಗೊಂಡ ನಂತರ, ಮತೀಯ ರಾಜಕಾರಣಕ್ಕೆ ಸ್ವಲ್ಪ ಜಾಗ ಸಿಕ್ಕಿದೆ. ಅಮೃತಪಾಲ್ ಸಿಂಗ್ ಮತ್ತು ಅವರ ಬೆಂಬಲಿಗರು ಇದರ ಲಾಭ ಪಡೆಯಲು ಬಯಸಿದ್ದಾರೆ.

ಲೋಕಸಭೆ ಸದಸ್ಯರಾಗಿ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರ!
ಇಂಜಿನಿಯರ್ ರಶೀದ್ ಎಂದೇ ಜನಪ್ರಿಯರಾಗಿರುವ ರಶೀದ್ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದರೆ, ಸಿಂಗ್ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಪರಾಧಗಳಿಗಾಗಿ ಅಸ್ಸಾಂನ ದಿಬ್ರುಗಢ್ ಜಿಲ್ಲೆಯ ಜೈಲಿನಲ್ಲಿದ್ದಾರೆ.

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ದೆಹಲಿಗೆ ತೆರಳಿದ ಅಮೃತಪಾಲ್ ಸಿಂಗ್
ಇತ್ತೀಚಿನ 2024 ರ ಲೋಕಸಭಾ ಚುನಾವಣೆಯಲ್ಲಿ, ಸಿಂಗ್ ಪಂಜಾಬ್‌ನ ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಅಗ್ನಿವೀರ್ ಅಮೃತಪಾಲ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡದ್ದರಿಂದ ಮಿಲಿಟರಿ ಗೌರವ ನೀಡಲಾಗಿಲ್ಲ: ಸೇನೆ ಸ್ಪಷ್ಟನೆ
ಅಗ್ನಿವೀರ್ ಅಮೃತ್‌ಪಾಲ್ ಸಿಂಗ್ ಕರ್ತವ್ಯದಲ್ಲಿದ್ದಾಗಲೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ, ಅಂತ್ಯಕ್ರಿಯೆಯಲ್ಲಿ ಹುತಾತ್ಮರಿಗೆ ನೀಡುವ ಮಿಲಿಟರಿ ಗೌರವಗಳನ್ನು ನೀಡಲಾಗಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ.

ಕೊನೆಗೂ ಸಿಕ್ಕಿಬಿದ್ದ ಖಲಿಸ್ತಾನಿ ಉಗ್ರ 'ಅಮೃತ್ ಪಾಲ್ ಸಿಂಗ್': ಪಂಜಾಬ್ ನಲ್ಲಿ ಬಂಧನ
ತಲೆಮರೆಸಿಕೊಂಡಿದ್ದ ಖಲಿಸ್ತಾನಿ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಇಂಗ್ಲೆಂಡ್‌ಗೆ ತೆರಳಲು ಅಮೃತ್‌ಪಾಲ್ ಸಿಂಗ್ ಪತ್ನಿ ಮುಂದು, ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂಧನ
ತೀವ್ರಗಾಮಿ ಬೋಧಕ ಅಮೃತಪಾಲ್ ಸಿಂಗ್ ಅವರ ಪತ್ನಿ ಕಿರಣ್‌ದೀಪ್ ಕೌರ್ ಅವರು ಲಂಡನ್‌ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ವಲಸೆ ಅಧಿಕಾರಿಗಳು ಇಲ್ಲಿನ ಶ್ರೀ ಗುರು ರಾಮ್ ದಾಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ತಲೆಮರೆಸಿಕೊಂಡಿರುವ ಖಲಿಸ್ಥಾನಿ ನಾಯಕ ಅಮೃತಪಾಲ್ ಸಿಂಗ್ ಆಪ್ತ ಪಾಪಲ್‌ಪ್ರೀತ್ ಸಿಂಗ್ ಬಂಧನ
ತೀವ್ರಗಾಮಿ ಅಮೃತಪಾಲ್ ಸಿಂಗ್ ಅವರ ಆಪ್ತ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಎಂಬಾತನನ್ನು ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಂದ್ರನ್ ವಾಲೆ ರೀತಿ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್!
ಖಲೀಸ್ಥಾನಿ ಪ್ರತ್ಯೇಕತಾವಾದಿ ಅಮೃತ್ ಪಾಲ್ ಸಿಂಗ್, 2022 ರಲ್ಲಿ ಭಾರತಕ್ಕೆ ಆಗಮಿಸುವುದಕ್ಕೂ ಮುನ್ನ ಖಲಿಸ್ಥಾನಿ ಉಗ್ರ ಜರ್ನೈಲ್ ಸಿಂಗ್ ಬಿಂದ್ರನ್ ವಾಲೆ ಅವನಂತೆ ಕಾಣಲು ಜಾರ್ಜಿಯಾದಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ

ತಪ್ಪಿಸಿಕೊಂಡು ತಿರುಗುತ್ತಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಮೊದಲ ವಿಡಿಯೋ ಬಿಡುಗಡೆ!
ಪೊಲೀಸರಿಂದ ತಪ್ಪಿಸಿಕೊಂಡು ತಿರುಗುತ್ತಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಇದೇ ಮೊದಲ ಬಾರಿಗೆ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.

