Andhra, Karnataka

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ; ಪರಿಸ್ಥಿತಿ ಗಂಭೀರ: DCM ಪರಮೇಶ್ವರ
23 ತಾಲೂಕುಗಳಲ್ಲಿ ವಾಸ್ತವ ಸ್ಥಿತಿಯ ಪರಿಶೀಲನೆ (ಗ್ರೌಂಡ್-ಟ್ರುಥಿಂಗ್) ನಡೆಯುತ್ತಿದ್ದು, ಅವುಗಳಲ್ಲಿ 10 ರಿಂದ 15 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ; ಕೊಲೆ ಶಂಕೆ
ಮೃತರನ್ನು ಅರಕಲಗೂಡು ತಾಲೂಕಿನ ಹಿರೇಹಳ್ಳಿಕೊಪ್ಪಲು ಗ್ರಾಮದ ಲಕ್ಷ್ಮಮ್ಮ (67) ಎಂದು ಗುರುತಿಸಲಾಗಿದ್ದು, ಅವರು ಪತಿ ಜತೆ ಗ್ರಾಮದಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವರ್ಷ ಕಳೆದರೂ ಉತ್ತರಿಸದ ಸರ್ಕಾರಕ್ಕೆ ಹೈಕೋರ್ಟ್ ಚಾಟಿ: ರಾಜ್ಯ ಸರ್ಕಾರಕ್ಕೆ ₹2,000 ದಂಡ ವಿಧಿಸಿದ ನ್ಯಾಯಾಲಯ
ಕರ್ನಾಟಕ ಸರ್ಕಾರವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದಕ್ಕೆ ಆಕ್ಷೇಪಣೆ ಸಲ್ಲಿಸಲು ಪದೇ ಪದೇ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಮತ್ತು ರಾಜ್ಯ ಹಣಕಾಸು ಇಲಾಖೆಗೆ ₹2,000 ದಂಡ ವಿಧಿಸಿದೆ. ಆ ಕುರಿತ ವರದಿ ಇಲ್ಲಿದೆ:

'ಮುಖ್ಯಮಂತ್ರಿಗಳೇ.. ನಿಮ್ಮ ಸರ್ಕಾರದ ಹಣಕಾಸಿನ ನಿರ್ವಹಣೆಯ ವೈಫಲ್ಯಕ್ಕೆ ಕರ್ನಾಟಕದ ಜನರು ಏಕೆ ಬೆಲೆ ತೆರಬೇಕು..?'
ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ರೂ.8ರವರೆಗೆ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಬೆನ್ನಲ್ಲೇ ಬಿಎಂಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.10ರಿಂದ 13ರವರೆಗೆ ಹೆಚ್ಚಿಸಲು ಸಿದ್ಧತೆ ನಡೆಸಲಾಗುತ್ತಿದೆ.

ಬೆಂಗಳೂರು ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: 5 ಪ್ರತ್ಯೇಕ ಪೊಲೀಸ್ ಆಯುಕ್ತಾಲಯಗಳಾಗಿ ವಿಭಜನೆ; ಸಚಿವ ಸಂಪುಟ ಅಸ್ತು..!
ಪ್ರಸ್ತುತ ಇರುವ ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯವನ್ನು ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಹಾಗೂ ಕೇಂದ್ರ ಎಂಬ ಐದು ಪ್ರತ್ಯೇಕ ಪೊಲೀಸ್ ಆಯುಕ್ತಾಲಯಗಳಾಗಿ ವಿಭಜಿಸಲಾಗುತ್ತದೆ. ಇವುಗಳ ಒಟ್ಟಾರೆ ಮೇಲ್ವಿಚಾರಣೆಯನ್ನು ಮುಖ್ಯ ಪೊಲೀಸ್ ಆಯುಕ್ತರು ನಿರ್ವಹಿಸಲಿದ್ದಾರೆ.
ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ₹1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!
ಆರೋಪಿಯ ವೈಯಕ್ತಿಕ ಪರಿಸ್ಥಿತಿಗಳಷ್ಟೇ ಅಲ್ಲದೆ, ಸಾರ್ವಜನಿಕ ಆಡಳಿತ ಮತ್ತು ಸಮಾಜದ ಮೇಲೆ ಭ್ರಷ್ಟಾಚಾರ ಬೀರುವ ವ್ಯಾಪಕ ಪರಿಣಾಮವನ್ನೂ ಪರಿಗಣಿಸಿ ಶಿಕ್ಷೆಯ ಪ್ರಮಾಣ ನಿಗದಿಪಡಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಕಬ್ಬಿನ MSP ಹೆಚ್ಚಿಸಿ, ಟನ್‌ಗೆ 6 ಸಾವಿರ ರೂ ನಿಗದಿ ಮಾಡಿ: ಕೇಂದ್ರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಆಗ್ರಹ
ಈವರೆಗೆ ಕೇಂದ್ರದಿಂದ ನಮಗೆ ಯಾವುದೇ ಆಹ್ವಾನ ಬಂದಿಲ್ಲ. ಸಕ್ಕರೆ ಕಾರ್ಖಾನೆಗಳು ಹಾಗೂ ರೈತರ ನಡುವೆ ಒಪ್ಪಂದವಾದ ಬಳಿಕವಷ್ಟೇ ಪ್ರಕ್ರಿಯೆ ಆರಂಭವಾಗಲಿದೆ.

ರಾಜ್ಯದಲ್ಲಿ ಪೊಲೀಸ್ ಠಾಣೆಗಳು 'ಕೈ' ಕಚೇರಿಗಳಾಗಿವೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ವೈಫಲ್ಯ ಮುಚ್ಚಿಹಾಕಲು ಕಪಟ ನಾಟಕ: BJP
ರಾಜ್ಯ ಸರ್ಕಾರ ಅಸ್ಥಿರವಾಗಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ಇದರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲೆ ತೀವ್ರ ಒತ್ತಡ ಉಂಟಾಗಿದ್ದು, ಅವರು ಅಸಹಾಯಕರಾಗಿದ್ದಾರೆ. ಅವರ ವರ್ತನೆಯಲ್ಲೇ ಈ ಒತ್ತಡ ಸ್ಪಷ್ಟವಾಗಿ ಕಾಣಿಸುತ್ತಿದೆ.

SIR ಗೊಂದಲ: 'ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ'; NDA ನಾಯಕರ ವಿರುದ್ಧ ಡಿ.ಕೆ ಶಿವಕುಮಾರ್ ವಾಗ್ದಾಳಿ
ನನಗೂ ಸಾಕಷ್ಟು ಸ್ನೇಹಿತರಿದ್ದಾರೆ. ಕಾರ್ಯಾಚರಣೆ ಹೇಗೆ ನಡೆದಿದೆ ಎಂಬುದನ್ನು ಅವರು ನನಗೆ ತಿಳಿಸಿದ್ದಾರೆ. ಬಡ ಕಾರ್ಯಕರ್ತರಿಗೆ 2,000, 5,000, 10,000 ಅರ್ಜಿಗಳನ್ನು ನೀಡಿದ್ದಾರೆ. ನಾನು ಚುನಾವಣಾ ಆಯೋಗಕ್ಕೆ ತೆರಳಿದ ಬಳಿಕ ರಾತ್ರೋರಾತ್ರಿ ಅವರು ಬಿಎಲ್‌ಒಗಳ ಬಳಿಗೆ ತೆರಳಿ, ಅರ್ಜಿಗಳನ್ನು ಕೇಳಿದ್ದಾರೆ.

