Andhra Pradesh

ಆಂಧ್ರ ಪ್ರದೇಶದಲ್ಲಿ ಕೋವಿಡ್ ಗೆ ಮೊದಲ ಬಲಿ
ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸಬ್-ವೇರಿಯಂಟ್ ಜೆಎನ್.1 ರ ಪ್ರಕರಣಗಳು ಹೆಚ್ಚುತ್ತಿರುವ ಆತಂಕದ ನಡುವೆ, ವಿಶಾಖಪಟ್ಟಣಂನಲ್ಲಿ 51 ವರ್ಷದ ಮಹಿಳೆ ಮಂಗಳವಾರ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದ ಬಾಪಟ್ಲಾಗೆ ಅಪ್ಪಳಿಸಿದ ಮಿಚಾಂಗ್ ಚಂಡಮಾರುತ
ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಾಪಟ್ಲಾಗೆ ಮಿಚಾಂಗ್ ಚಂಡಮಾರುತ ಅಪ್ಪಳಿಸಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮಿಚಾಂಗ್ ಚಂಡಮಾರುತ: ಆಂಧ್ರ ಪ್ರದೇಶದ ದಕ್ಷಿಣ ಕರಾವಳಿಯ ನಿವಾಸಿಗಳ ಸ್ಥಳಾಂತರ
ಮಿಚಾಂಗ್ ಚಂಡಮಾರುತ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ದಕ್ಷಿಣ ಕರಾವಳಿಯ ಗ್ರಾಮಗಳಲ್ಲಿ ವಾಸಿಸುತ್ತಿದ್ದ ಸುಮಾರು 900 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಮಿಚಾಂಗ್ ಚಂಡಮಾರುತ ಅಬ್ಬರ: ಚೆನ್ನೈ ಜಲಾವೃತ; ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ
ದಕ್ಷಿಣ ಭಾರತದಲ್ಲಿ ಮಳೆ, ತೀವ್ರ ಪ್ರವಾಹ ಸೃಷ್ಟಿಸಿರುವ ಮಿಚಾಂಗ್ ಚಂಡಮಾರುತ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಮೈಚಾಂಗ್ ಚಂಡಮಾರುತ: ಆಂಧ್ರಪ್ರದೇಶದ ಎಲ್ಲಾ ಶಾಲೆಗಳಿಗೆ ಇಂದು, ನಾಳೆ ರಜೆ; ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಣೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೈಚಾಂಗ್ ಚಂಡಮಾರುತ ನೆಲ್ಲೂರು ಮತ್ತು ಮಚಲಿಪಟ್ನಂ ನಡುವೆ ಅಪ್ಪಳಿಸಲಿದ್ದು, ಬಾಪಟ್ಲಾ ಮತ್ತು ಗುಂಟೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 4 ಮತ್ತು 5 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದಲ್ಲದೆ, ರಾಜ್ಯದ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಆಂಧ್ರ ಸಿಎಂ ಜೊತೆ ಮಾತನಾಡಿದ ಪ್ರಧಾನಿ ಮೋದಿ; ಚಂಡಮಾರುತ ನಿಭಾಯಿಸಲು ಅಗತ್ಯ ನೆರವು ನೀಡುವ ಭರವಸೆ
ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತುಕತೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ: ಆಂಧ್ರಪ್ರದೇಶ ಸಮೀಪ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಭಾರಿ ಗಾಳಿ ಸಹಿತ ಮಳೆ
ದಕ್ಷಿಣ ಭಾರತದಲ್ಲಿ ದಿಢೀರ್ ಹವಾಮಾನ ಬದಲಾವಣೆಯಾಗಿದ್ದು, ಆಂಧ್ರಪ್ರದೇಶ ಸಮೀಪ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ.

ಆಂಧ್ರ ಪ್ರದೇಶದ ಉದ್ಯಮಿಗೆ ನಿವೇಶನ ಕೊಡಿಸುವುದಾಗಿ ವಂಚನೆ: ಬೆಂಗಳೂರಿನ ಐವರ ಬಂಧನ
ನಿವೇಶನ ಕೊಡಿಸುವುದಾಗಿ ಆಂಧ್ರ ಪ್ರದೇಶ ಮೂಲದ ಉದ್ಯಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು 1.90 ಕೋಟಿ ರೂ. ವಂಚಿಸಿದ್ದ ಐವರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತಿರುಪತಿಯಲ್ಲಿ ಚೆನ್ನೈ ಮೂಲದ ಐವರು ಕಳ್ಳರ ಬಂಧನ; 4.3 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶಕ್ಕೆ
ಆಂಧ್ರಪ್ರದೇಶ ಪೊಲೀಸರು ಸೋಮವಾರ ತಿರುಪತಿ ಜಿಲ್ಲೆಯಲ್ಲಿ ಐದು ಟನ್ಗೂ ಹೆಚ್ಚು ರಕ್ತ ಚಂದನ ಮರದ ದಿಮ್ಮಿಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಐವರು ಕಳ್ಳರ ತಂಡವನ್ನು ಬಂಧಿಸಿದ್ದಾರೆ. ಬಂಧಿತರಿಂದ 4.3 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ...

