anna bhagya scheme

ಅನ್ನಭಾಗ್ಯ ಯೋಜನೆ: ಸದನದಲ್ಲಿ 'ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿ ಉಲ್ಲೇಖಿಸಿದ ಎಚ್.ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಧಾನ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಸರ್ಕಾರ ಫಲಾನುಭವಿಗಳಿಗೆ ಅಕ್ಕಿ ಬದಲು ಹಣ ನೀಡುವ ನಿರ್ಧಾರವನ್ನು ಸ್ವಾಗತಿಸಿದರು.

ಸೋಮವಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ: ಸಚಿವ ಮುನಿಯಪ್ಪ
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿಯ ಬದಲಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುವ ಯೋಜನೆ ಸೋಮವಾರದಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ: ಕಾಂಗ್ರೆಸ್ ಆರೋಪ
ಕೇಂದ್ರವು ತನ್ನ ಸಂಗ್ರಹದಿಂದ ರಾಜ್ಯ ಸರ್ಕಾರಗಳಿಗೆ ಆಹಾರ ಧಾನ್ಯಗಳ ಮಾರಾಟವನ್ನು ಸ್ಥಗಿತಗೊಳಿಸಿರುವ ಕುರಿತು ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಕಟುವಾದ ವಾಗ್ದಾಳಿ ನಡೆಸಿದ್ದು, ಇದು ಕರ್ನಾಟಕದ ಮೇಲಿನ ಸೇಡು ಎಂದು ಬಣ್ಣಿಸಿದೆ.

'ಅನ್ನ ಭಾಗ್ಯ' ಯೋಜನೆಗೆ ಸಿಎಂ ಸಿದ್ದರಾಮಯ್ಯ ಜು.10ರಂದು ವಿಧಾನ ಸೌಧದಲ್ಲಿ ಅಧಿಕೃತ ಚಾಲನೆ
ಕಾಂಗ್ರೆಸ್ ಸರ್ಕಾರ ಜನತೆಗೆ ನೀಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಈಗಾಗಲೇ ಜಾರಿಗೆ ಬಂದಿದ್ದು, ಅನ್ನ ಭಾಗ್ಯ(Anna Bhagya) ಯೋಜನೆಗೆ ಇದೇ ಜುಲೈ 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಚಾಲನೆ ನೀಡಲಿದ್ದಾರೆ.

ಜುಲೈ 1 ರಿಂದ ಎಂದು ಹೇಳಿಲ್ಲ, ಜುಲೈ 10ರಿಂದ ಹಣ ಕೊಡುವ ಪ್ರಕ್ರಿಯೆ ಆರಂಭ ಸಾಧ್ಯತೆ: ಸಿಎಂ ವ್ಯತಿರಿಕ್ತ ಹೇಳಿಕೆ
ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಜುಲೈ 1ರಿಂದಲೇ ಹಣ ನೀಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳೇ 5 ಕೆಜಿ ಅಕ್ಕಿ ಬದಲಿಗೆ ಹಣ ಕೊಡುತ್ತೇವೆ. ಬಹುಶಃ ಜುಲೈ 10ರಿಂದ ಹಣ ನೀಡುವ ಪ್ರಕ್ರಿಯೆ ಪ್ರಾರಂಭವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೊಟ್ಟ ಮಾತಿನಂತೆ 'ಅನ್ನ ಭಾಗ್ಯ' ಯೋಜನೆ ಜಾರಿ; 5 ಕೆಜಿ ಅಕ್ಕಿ ಜೊತೆ ನಾಳೆಯಿಂದಲೇ ಖಾತೆಗೆ ಹಣ ವರ್ಗಾವಣೆ: ಸಚಿವ ಮುನಿಯಪ್ಪ
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಿಪಿಎಲ್ ಹೊಂದಿರುವವರಿಗೆ 'ಅನ್ನ ಭಾಗ್ಯ' (Anna Bhagya) ಯೋಜನೆ ನಾಳೆ ಜುಲೈ 1ರಂದು ಜಾರಿಗೆ ಬರಲಿದೆ.

ಅನ್ನಭಾಗ್ಯ ಯೋಜನೆ ಜುಲೈನಿಂದಲೇ ಪ್ರಾರಂಭ; 5 ಕೆಜಿ ಅಕ್ಕಿ ಬದಲು 170 ರೂ. ಹಣ ನೀಡಲು ಸಂಪುಟ ನಿರ್ಧಾರ
ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಭಾರತೀಯ ಆಹಾರ ನಿಗಮ ಅಕ್ಕಿ ಕೊಡಲು ನಿರಾಕರಿಸಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ಸಭೆ ನಿರ್ಧರಿಸಿದೆ.

ಅಕ್ಕಿ ದೊರೆತಿಲ್ಲ, ಅನ್ನಭಾಗ್ಯ ಯೋಜನೆ ಜಾರಿ ವಿಳಂಬವಾಗಬಹುದು: ಸಿಎಂ ಸಿದ್ದರಾಮಯ್ಯ
ಅನ್ನಭಾಗ್ಯ ಯೋಜನೆಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಅಗತ್ಯವಿದೆ. ಅಷ್ಟು ಅಕ್ಕಿ ಇನ್ನೂ ದೊರೆತಿಲ್ಲ. ಹೀಗಾಗಿ ಯೋಜನೆ ಜಾರಿ ವಿಳಂಬವಾಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.

ಅನ್ನಭಾಗ್ಯ ಯೋಜನೆ: ಅಕ್ಕಿ ಖರೀದಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಕರ್ನಾಟಕ ಆಹಾರ ಮತ್ತು ರಾಜ್ಯ ಸಚಿವ ಕೆ ಎಚ್ ಮುನಿಯಪ್ಪ ನಡುವೆ ನಡೆದ ಮಾತುಕತೆ ಯಾವುದೇ ಫಲ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಅಕ್ಕಿ ಖರೀದಿ ಸಂಬಂಧ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.

