Anna bhagya yojane

ಸಿದ್ದರಾಮಯ್ಯ ಸರ್ಕಾರಕ್ಕೆ ಅಕ್ಕಿ ಖರೀದಿಗೆ ಮತ್ತಷ್ಟು ಸವಾಲು: ನಗದು ಜಮಾ ಯೋಜನೆ ಮುಂದುವರಿಕೆ!
ಹಲವು ರಾಜ್ಯಗಳಲ್ಲಿ ಅಕ್ಕಿ ಉತ್ಪಾದನೆ ಕಡಿಮೆಯಾಗಿರುವುದರಿಂದ ಪರಿಸ್ಥಿತಿ ಮತ್ತಷ್ಟು ಕಠಿಣವಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರವು ತನ್ನ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಪೂರ್ಣ ಪ್ರಮಾಣದಲ್ಲಿ ಜನರಿಗೆ ನೀಡಲು ಆಗುತ್ತಿಲ್ಲ. ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು.

ಮೋದಿ ಸರ್ಕಾರದ ಅಕ್ಕಿ, ಸಿದ್ದರಾಮಣ್ಣನ ಜಾತ್ರೆ; ಯಾರದೋ ದುಡ್ಡು ಕಾಂಗ್ರೆಸ್ ಯಾತ್ರೆ: ಪ್ರತಾಪ್ ಸಿಂಹ
ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳು ಹೇಗೆ ಎಂದರೆ, ಒಂಥರಾ ಗಂಡನ ದರೋಡೆ ಮಾಡಿ ಹೆಂಡತಿಗೆ ಕೊಟ್ಟಹಾಗೆ. ಗಂಡನ ಜೇಬಿಗೆ ಕತ್ತರಿ ಹಾಕಿ ಪತ್ನಿಗೆ ಕೊಡುವುದರಲ್ಲಿ ಏನೂ ಅರ್ಥ ಇದೆ ಹೇಳಿ?

ಅನ್ನಭಾಗ್ಯ ಯೋಜನೆಗೆ ಎಫ್ ಸಿ ಐ ಹೆಚ್ಚುವರಿ ಅಕ್ಕಿ: ಕಮಿಟ್‌ಮೆಂಟ್ ಪತ್ರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಕೊಡುವುದಾಗಿ ಭಾರತೀಯ ಆಹಾರ ನಿಗಮ ಕಮಿಟ್ಮೆಂಟ್ ಪತ್ರ ಕೊಟ್ಟಿತ್ತೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೇಳಿದ್ದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ.

