ರಾಜ್ಯಮಹಾಮಳೆಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ವ್ಯಕ್ತಿ ಸಾವು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಕಾರಿನಲ್ಲಿ ಒಬ್ಬರು ಮೃತಪಟ್ಟರೆ ಮತ್ತೊಬ್ಬರು ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದು, ಶವವಾಗಿ ಪತ್ತೆಯಾದ ಧಾರುಣ ಘಟನೆ ನಡೆದಿದೆ.