ರಾಜ್ಯ2 ಲಕ್ಷ ಆಂಟಿಜೆನ್ ಕಿಟ್ ಖರೀದಿಗೆ ನಿರ್ಧಾರ: ಆರೋಗ್ಯ ಸಚಿವ ಬಿ. ಶ್ರೀರಾಮುಲು
ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಶೇಕಡಾ 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.