Anurag Thakur

ಲೈಂಗಿಕ ಕಿರುಕುಳ: ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆ ಮುಂದುವರಿಕೆ, ಮಾತುಕತೆಗೆ ಕೇಂದ್ರ ಮತ್ತೊಮ್ಮೆ ಆಹ್ವಾನ
ಕುಸ್ತಿ ಅಸೋಸಿಯೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು, ಪಟ್ಟು ಬಿಡದೆ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವಲ್ಲೇ ಕೇಂದ್ರ ಸರ್ಕಾರ ಕುಸ್ತಿಪಟುಗಳನ್ನು ಮತ್ತೊಮ್ಮೆ ಮಾತುಕತೆಗೆ ಆಹ್ವಾನ ನೀಡಿದೆ.

ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲಾಗುವುದು, ಪೊಲೀಸರಿಂದ ಶೀಘ್ರವೇ ಚಾರ್ಜ್ ಶೀಟ್ ಸಲ್ಲಿಕೆ: ಅನುರಾಗ್ ಠಾಕೂರ್
ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಶುಕ್ರವಾರ, ಪೊಲೀಸರು ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದು, ಕುಸ್ತಿಪಟುಗಳಿಗೆ ನ್ಯಾಯ ಸಿಗಲಿದೆ ಎಂದಿದ್ದಾರೆ.

ಪ್ರತಿಭಟನಾನಿರತ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರ ಸೂಕ್ಷ್ಮವಾಗಿ ನಿಭಾಯಿಸುತ್ತಿದೆ: ಕ್ರೀಡಾ ಸಚಿವ ಅನುರಾಗ್ ಠಾಕೂರ್
ಲೈಂಗಿಕ ಕಿರುಕುಳ ಆರೋಪದ ಮೇಲೆ ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರವು ಸೂಕ್ಷ್ಮವಾಗಿ ನಿಭಾಯಿಸುತ್ತಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ.

ದೇವರನ್ನೂ ಕನ್ಫ್ಯೂಸ್ ಮಾಡುತ್ತಾರೆ ಮೋದಿ ಹೇಳಿಕೆ: ಭಾರತಕ್ಕೆ ಮಾಡಿದ ಅವಮಾನ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿ
ದೇವರೊಂದಿಗೆ ಚರ್ಚೆಗೆ ಕೂರಿಸಿದರೆ, ದೇವರನ್ನೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ಫ್ಯೂಸ್ ಮಾಡುತ್ತಾರೆಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಕುಸ್ತಿಪಟುಗಳ ಎಲ್ಲಾ ಬೇಡಿಕೆ ಈಡೇರಿಸಲಾಗಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಎಲ್ಲಾ....

ಕಾಂಗ್ರೆಸ್ ದೇಶದ ಕ್ಷಮೆ ಯಾಚಿಸಬೇಕು: ಮಲ್ಲಿಕಾರ್ಜುನ ಖರ್ಗೆ 'ವಿಷಕಾರಿ ಹಾವು' ಹೇಳಿಕೆಗೆ ಅನುರಾಗ್ ಠಾಕೂರ್ ಕಿಡಿ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಅನುರಾಗ್ ಠಾಕೂರ್, ಖರ್ಗೆ ಅವರನ್ನು ಯಾರೊಬ್ಬರೂ ತಮ್ಮ ಪಕ್ಷದ ಮುಖ್ಯಸ್ಥ ಎಂದು ಒಪ್ಪಿಕೊಳ್ಳದ ಕಾರಣ ಈ ಹೇಳಿಕೆ ನೀಡಿದ್ದಾರೆ ಎಂದು ಗುರುವಾರ ಹೇಳಿದ್ದಾರೆ.

ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲು ಇನ್ನೂ ಸಮಯವಿದೆ: ಅನುರಾಗ್ ಠಾಕೂರ್
ಮಾನನಷ್ಟ ಮೊಕದ್ದಮೆಯಲ್ಲಿ ನೇಡಲಾಗಿರುವ ಶಿಕ್ಷೆಗೆ ತಡೆ ಕೋರಿದ್ದ ಕಾಂಗ್ರೆಸ್ ನಾಯಕನ ಮನವಿಯನ್ನು ಗುಜರಾತ್ ನ್ಯಾಯಾಲಯ ತಿರಸ್ಕರಿಸಿದ್ದು, ರಾಹುಲ್ ಗಾಂಧಿಗೆ ರಾಷ್ಟ್ರದ ಕ್ಷಮೆ ಕೇಳಲು ಇನ್ನೂ ಸಮಯವಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ.

ಇಂತಹ ಸುದ್ದಿಗಳನ್ನು ಆನಂದಿಸಿ: ಎನ್ ಸಿಪಿ ಇಬ್ಭಾಗದ ಊಹಾಪೋಹಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಭಾಗವಾಗಿರಲು ಎನ್ ಸಿಪಿಯ ಒಂದಷ್ಟು ಶಾಸಕರು ಬಯಸುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯೆ ನೀಡಿದ್ದು, ಇಂತಹ ಸುದ್ದಿಗಳನ್ನು ಆನಂದಿಸಿ ಎಂದು ಹೇಳಿದ್ದಾರೆ.

'ಸೃಜನಶೀಲತೆಯ ಹೆಸರಿನಲ್ಲಿ ದುರುಪಯೋಗ ಸಹಿಸಲಸಾಧ್ಯ..ನಿಂದನೀಯ ಭಾಷೆ ಬಳಕೆ, ಅಶ್ಲೀಲತೆ ಪ್ರಚಾರ ಸರಿಯಲ್ಲ': ಕೇಂದ್ರ ಸರ್ಕಾರ
OTT ಪ್ರಸಾರಕರ ವಿರುದ್ಧ ಕೇಂದ್ರ ಸರ್ಕಾರ ಮಹತ್ವದ ಹೇಳಿಕೆ ನೀಡಿದ್ದು, ಸೃಜನಶೀಲತೆಯ ಹೆಸರಿನಲ್ಲಿ ದುರುಪಯೋಗ ಸಹಿಸಲಸಾಧ್ಯ..ನಿಂದನೀಯ ಭಾಷೆ ಬಳಕೆ, ಅಶ್ಲೀಲತೆ ಪ್ರಚಾರ ಸರಿಯಲ್ಲ ಎಂದು ಹೇಳಿದೆ.

