appointed

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕ
ಇದೇ ಮೊದಲ ಬಾರಿಗೆ ನಿರಂತರವಾಗಿ ವೃತ್ತಿಪರತೆ ಕಾಪಾಡಿಕೊಂಡು ಬಂದಿರುವ ಅಲ್ಪಸಂಖ್ಯಾತ ಸಮುದಾಯದ ಹಿರಿಯ ಮಹಿಳಾ ಪ್ರತಿನಿಧಿಯೊಬ್ಬರು ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ.

ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷರಾಗಿ ರಮೇಶ್ ಬಾಬು ನೇಮಕ
ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರನ್ನು ದೇವರಾಜ ಅರಸು ಟ್ರಕ್ ಟರ್ಮಿನಲ್ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಬಿಹಾರ: ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಭೂಪೇಶ್ ಬಘೇಲ್ ನೇಮಕ!
ಬಿಹಾರದಲ್ಲಿ ರಾಜಕೀಯ ಬಿರುಗಾಳಿ ಎದ್ದಿರುವಂತೆಯೇ ಭಾರತ ಜೋಡೋ ನ್ಯಾಯ ಯಾತ್ರೆ ಹಾಗೂ ಅಲ್ಲಿ ಪಕ್ಷದ ಚಟುವಟಿಕೆ ನೋಡಿಕೊಳ್ಳಲು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಕಾಂಗ್ರೆಸ್ ಶನಿವಾರ ನೇಮಿಸಿದೆ.

ಬಿಎಸ್ ವೈ ಪುತ್ರನಿಗೆ ಒಲಿದ ಅದೃಷ್ಟ, ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ!
ಅಂತೂ ಇಂತೂ ಕೊನೆಗೂ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯನೂರು ಮಂಜುನಾಥ್ ನೇಮಕ
ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಬೆಂಗಳೂರು ನಗರಕ್ಕೆ ಡಿಕೆಶಿ, ಮೈಸೂರಿಗೆ ಮಹಾದೇವಪ್ಪ, ರಾಮನಗರಕ್ಕೆ ರಾಮಲಿಂಗಾ ರೆಡ್ಡಿ
ಸಿಎಂ ಸಿದ್ದರಾಮಯ್ಯ ಕೊನೆಗೂ ತಲೆನೋವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್ ಸರ್ಕಾರ, ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಶುಕ್ರವಾರ ನೇಮಕ ಮಾಡಿದೆ.

ರಾಜಕಾರಣಿಗಳ ಲಾಬಿಗೆ ಸೊಪ್ಪು ಹಾಕದ ಸರ್ಕಾರ: ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ನೂತನ 7 ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ನೇಮಿಸಿ ಸರ್ಕಾರ ಆದೇಶ
ರಾಜ್ಯದ ನೂತನ 7 ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರ ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ.

ಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ನೇಮಕ
ಶುಕ್ರವಾರವಷ್ಟೇ ಸ್ವಯಂ ನಿವೃತ್ತಿ ಪಡೆದ ಪಂಜಾಬ್ ಕೇಡರ್‌ನ 1985 ಬ್ಯಾಚ್‌ನ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

