ರಾಜ್ಯಅರಬ್ ಮಹಿಳೆಯರ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪಾರ್ಹ ಟ್ವೀಟ್: ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿಗೆ ಒತ್ತಾಯ
ಐದು ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಸದ್ದುಮಾಡಿ ವೈರಲ್ ಆಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಟೀಕೆಗಳ ಸುರಿಮಳೆಯೇ ಕೇಳಿಬರುತ್ತಿದೆ. ಅವರನ್ನು ಸಂಸದ ಸ್ಥಾನದಿಂದ ಕಿತ್ತುಹಾಕಬೇಕೆಂದು ಪ್ರಧಾನಿಯನ್ನು ಒತ್ತಾಯಿಸುತ್ತಿದ್ದಾರೆ.