Araga jnanendra

ರಾಜ್ಯದಲ್ಲಿ 9,432 ಪೊಲೀಸ್ ಪೇದೆ ಹುದ್ದೆಗಳು ಖಾಲಿಯಿವೆ: ಆರಗ ಜ್ಞಾನೇಂದ್ರ
ರಾಜ್ಯದಲ್ಲಿ 9,432 ಪೊಲೀಸ್ ಪೇದೆ ಹುದ್ದೆ ಖಾಲಿಯಿದ್ದು, ಪ್ರಸ್ತುತ 3,484 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಳಿಕ 1,500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 5 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪೊಲೀಸ್ ಸಿಬ್ಬಂದಿ ಬೌದ್ಧಿಕ, ದೈಹಿಕ ಕ್ಷಮತೆ ಹೆಚ್ಚಿಸಲು ಅಗತ್ಯ ಕ್ರಮ: ಸಚಿವ ಆರಗ ಜ್ಞಾನೇಂದ್ರ
ಅಪರಾಧಿ ಗಳಿಗೆ ಶಿಕ್ಷೆ ವಿಧಿಸುವ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ವಿಶೇಷ ಪ್ರಯತ್ನ ಮಾಡಬೇಕು ಹಾಗೂ ಇದಕ್ಕಾಗಿ ಕೌಶಲ್ಯ ಹೆಚ್ಚಿಸಿಕೊಳ್ಳಲು ಇಲಾಖೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಟೋಯಿಂಗ್ ವ್ಯವಸ್ಥೆ ಮತ್ತೆ ಜಾರಿ ಮಾಡಲ್ಲ: ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ, ಸರ್ಕಾರದ ಮುಂದಿಲ್ಲ ವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ; ಸಾಕ್ಷಿ ಕೊಟ್ಟರೆ ಈಗಲೂ ತನಿಖೆ ನಡೆಸುತ್ತೇವೆ: ಆರಗ ಜ್ಞಾನೇಂದ್ರ
ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಬಿಟ್ ಕಾಯಿನ್ ಹಗರಣದ ತನಿಖೆಗೆ ಸರಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ: ಆರಗ ಜ್ಞಾನೇಂದ್ರ
ರಾಜ್ಯದಲ್ಲಿ ಖಾಲಿ ಇರುವ 3,064 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ನೇರವಾಗಿ ಮಾತನಾಡುವ ಹಾಸ್ಯ ಪ್ರಜ್ಞೆಯುಳ್ಳ ವ್ಯಕ್ತಿಯಾಗಿದ್ದರು ಉಮೇಶ್ ಕತ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ
ಸಚಿವ ಉಮೇಶ್ ಕತ್ತಿಯವರು ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದ ನೇರ-ನಿಷ್ಠುರ ವ್ಯಕ್ತಿಯಾಗಿದ್ದರು ಎಂದು ಗೃಹ ಸಚಿವ ಆರಗ ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ: ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ
ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಶೀಘ್ರದಲ್ಲೇ ರಾಜ್ಯದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿವಿ ಸ್ಥಾಪನೆ: ಆರಗ ಜ್ಞಾನೇಂದ್ರ
ಇಡೀ ದಕ್ಷಿಣ ಭಾರತದಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿಧಿ ವಿಜ್ಞಾನ ಶಾಸ್ತ್ರ ವಿಶ್ವ ವಿದ್ಯಾಲಯ ಸ್ಥಾಪಿಸಲು ಕೇಂದ್ರ ಸರ್ಕಾರದ ಒಪ್ಪಿಗೆ ಪಡೆಯಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ತಪ್ಪು, ಇದು ಚುನಾವಣಾ ವರ್ಷ, ಜಾಗ್ರತೆಯಿಂದ ಮಾತಾಡಬೇಕು: ಆರಗ ಜ್ಞಾನೇಂದ್ರ
ಕೊಡಗು ಜಿಲ್ಲೆ ಪ್ರವಾಸ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದು, ಕಾರಿಗೆ ಮೊಟ್ಟೆ ಎಸೆದ ಕೃತ್ಯ ತಪ್ಪು ಎಂದು ಹೇಳಿದ್ದಾರೆ.

