Arnab Goswami

ವಾಸ್ತುಶಿಲ್ಪಿಯ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಮುಂಬೈ ಪೊಲೀಸರಿಂದ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ
ಬುಧವಾರ ವಾಣಿಜ್ಯ ನಗರಿ ಮುಂಬೈಯಲ್ಲಿ ನಡೆದ ಹಠಾತ್ ಬೆಳವಣಿಗೆಯಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಯವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಅರ್ನಬ್ ಬಂಧನ ತುರ್ತುಪರಿಸ್ಥಿತಿ ನೆನಪಿಸುತ್ತಿದೆ: ಗೃಹ ಸಚಿವ ಅಮಿತ್ ಶಾ
ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರ ಬಂಧನಕ್ಕೆ ವಿವಿಧ ವಲಯಗಳಿಂದ ಭಾರಿ ಆಕ್ರೋಶಗಳು ವ್ಯಕ್ತವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಹಲವು ನಾಯಕರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
ಪತ್ರಕರ್ತ, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವ ಕ್ರಮವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತೀವ್ರವಾಗಿ ಖಂಡಿಸಿದ್ದಾರೆ.

ಅರ್ನಬ್ ವಿರುದ್ಧದ ಎಫ್ಐಆರ್ ರದ್ದತಿ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರದ ಅರ್ಜಿ ವಿಚಾರಣೆ ಮುಂದೂಡಿದ 'ಸುಪ್ರೀಂ'
ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಿಸಿರುವ ಎರಡು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ಎರಡು ವಾರಗಳ ಕಾಲ ಮುಂದೂಡಿದೆ.

ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಟ್ಯಾಗ್ ಲೈನ್ ಬಳಕೆ ಮಾಡಬಹುದು: ದೆಹಲಿ ಹೈಕೋರ್ಟ್
ಟೈಮ್ಸ್ ನೌ ಸುದ್ದಿವಾಹಿನಿ ತೊರೆದು ರಿಪಬ್ಲಿಕ್ ಟಿವಿ ಆರಂಭಿಸಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಟ್ಯಾಗ್ ಲೈನ್ ಬಳಕೆ ಮಾಡಬಹುದು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.

ನಕಲಿ ಟಿಆರ್ ಪಿ ಕೇಸು: ಎಫ್ಐಆರ್ ರದ್ದು ಕೋರಿ ಮುಂಬೈ ಹೈಕೋರ್ಟ್ ಮೊರೆ ಹೋದ ರಿಪಬ್ಲಿಕ್ ಟಿವಿ
ನಕಲಿ ಟಿಆರ್ ಪಿ ಕೇಸಿನಲ್ಲಿ ದಾಖಲಿಸಿರುವ ಎಫ್ಐಆರ್ ನ್ನು ರದ್ದುಪಡಿಸುವಂತೆ ಕೋರಿ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಟಿವಿಯ ಮಾಲೀಕ ಸಂಸ್ಥೆ ಎಆರ್ ಜಿ ಔಟ್ಲಿಯರ್ ಮೀಡಿಯಾ ಪ್ರೈ.ಲಿಮಿಟೆಡ್ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದಾರೆ.

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್
ಸ್ಪೀಕರ್ ಅನುಮತಿ ಪಡೆಯದೆ ವಿಧಾನಸಭಾ ಪ್ರಕ್ರಿಯೆಗಳ ಪ್ರತಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ ನನ್ನು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ನೀಡಿದ್ದಾರೆ.

ರಿಪಬ್ಲಿಕ್ ಟಿವಿ ಮೇಲೆ ಮುಂಬೈ ಪೋಲೀಸ್ ಕಣ್ಗಾವಲು! ಟಿಆರ್‌ಪಿ ದಂಧೆ ನಡೆಸುತ್ತಿದ್ದ ಇಬ್ಬರ ಬಂಧನ
ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್‌ಪಿ) ತಿರುಚುವಿಕೆ ದಂಧೆ ನಡೆಯುತ್ತಿರುವುದಾಗಿ ಆರೋಪಿಸಿ ಮುಂಬೈ ಪೋಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಸುನಂದಾ ಪುಷ್ಕರ್ ಪ್ರಕರಣ: ಸಂಯಮದಿಂದ ವರ್ತಿಸುವಂತೆ ಅರ್ನಾಬ್ ಗೆ ದೆಹಲಿ ಹೈಕೋರ್ಟ್ ಸಲಹೆ
ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಸಮಾನಾಂತರ ವಿಚಾರಣೆ ಹಾಗೂ ತನಿಖೆ ನಡೆಸಿದ್ದಕ್ಕಾಗ ಅರ್ನಾಬ್ ಗೋಸ್ವಾಮಿಯನ್ನು ದೆಹಲಿ ಹೈಕೋರ್ಟ್ ಪ್ರಶ್ನಿಸಿದೆ. ಅಲ್ಲದೆ ಈ ವಿಷಯವನ್ನು ಚರ್ಚಿಸುವ ವೇಳೆ ವಾಕ್ಚಾತುರ್ಯವನ್ನು ಬಳಸದೆ ಸಂಯಮವನ್ನು ತೋರಿಸಿ ಎಂದು ಹೇಳಿದೆ.

