Arnab Goswami

ಧಾರ್ಮಿಕ ಭಾವನೆಗೆ ಧಕ್ಕೆ: ಅರ್ನಬ್ ಗೋಸ್ವಾಮಿ ವಿರುದ್ಧ ಕೇಸ್ ದಾಖಲು
ಮುಂಬೈನ ಬಾಂದ್ರಾದಲ್ಲಿರುವ ಮಸೀದಿಯೊಂದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಸುದ್ದಿ ವಾಹಿನಿಯ ಇತರ ಇಬ್ಬರ ವಿರುದ್ಧ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ.

ಅರ್ನಾಬ್ ಗೋಸ್ವಾಮಿ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ಜಾಮೀನು
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮೇಲಿನ ದಾಳಿಗೆ ಸಂಬಂಧಿಸಿದಂತೆ ಬಂಧಿತರಾದ ಇಬ್ಬರಿಗೆ ಬೋಯಿವಾಡಾ ನ್ಯಾಯಾಲಯ ಜಾಮೀನು ನೀಡಿದೆ.

ಸೋನಿಯಾ ಗಾಂಧಿ ಅವಹೇಳನ: ಅರ್ನಾಬ್ ಗೋಸ್ವಾಮಿಗೆ ಮೂರು ವಾರ ಬಂಧನದಿಂದ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಮಾನಹಾನಿ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಎಡಿಟರ್ ಅರ್ನಾಬ್ ಗೋಸ್ವಾಮಿ ಅವರ ವಿರುದ್ಧ ದಾಖಲಾದ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅವರಿಗೆ ಮೂರು ವಾರಗಳ ಕಾಲ ರಿಲೀಫ್ ನೀಡಿದೆ. ಸರ್ವೋಚ್ಚ ನ್ಯಾಯಾಲಯವು ಗೋಸ್ವಾಮಿ ಬಂಧನಕ್ಕೆ ಮೂರು ವಾರಗಳ ಕಾಲ ತಡೆ ನೀಡಿದೆ.

ಅರ್ನಾಬ್ ಗೋಸ್ವಾಮಿಗಿಂತ ಸೋನಿಯಾ ಗಾಂಧಿ ಹೆಚ್ಚಿನ ಮಟ್ಟಿಗೆ ಭಾರತೀಯರು: ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ನಮ್ಮೆಲ್ಲರಂತೆ ಭಾರತೀಯರು. ಪತ್ರಕರ್ತ ಅರ್ನಾಬ್ ಗೋಸ್ವಾಮಿಯವರಿಗಿಂತಲೂ ಹೆಚ್ಚಿನ ಮಟ್ಟಿಗೆ ಭಾರತೀಯರು. ದೇಶದಲ್ಲಿ ಸಾಮರಸ್ಯ ಮತ್ತು ಭಾತೃತ್ವ ಬೆಳೆಯಲು ಸೋನಿಯಾ ಗಾಂಧಿಯವರು ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹಾಡಿಹೊಗಳಿದ್ದಾರೆ.

ನನ್ನ ಮೇಲಿನ ದಾಳಿಗೆ ಸೋನಿಯಾ ಗಾಂಧಿಯೇ ನೇರ ಕಾರಣ: ಅರ್ನಾಬ್ ಗೋಸ್ವಾಮಿ
ಕೆಲಸ ಮುಗಿಸಿ ತಮ್ಮ ಪತ್ನಿಯೊಂದಿಗೆ ಕಾರಿನಲ್ಲಿ ಹೊರಟ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಅವರ ಪತ್ನಿ ಸನಿಯಾ ಗೋಸ್ವಾಮಿ ವಿರುದ್ಧ ನಡೆದ ದಾಳಿಗೆ ಸಂಬಂಧಿಸಿದಂತೆ ಸ್ವತಃ ಅರ್ನಾಬ್ ಗೋಸ್ವಾಮಿಯವರೇ ವಿಡಿಯೊ ಸಂದೇಶದ ಮೂಲಕ ಟ್ವೀಟ್ ಮಾಡಿದ್ದಾರೆ.

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ, ಪತ್ನಿ ಮೇಲೆ ದುಷ್ಕರ್ಮಿಗಳ ದಾಳಿ: ಪ್ರಾಣಾಪಾಯದಿಂದ ಪಾರು
ಕೆಲಸ ಮುಗಿಸಿ ಸ್ಟುಡಿಯೊದಿಂದ ಮನೆ ಕಡೆಗೆ ಕಾರಿನಲ್ಲಿ ಹೊರಟಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಮತ್ತು ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು ಅವರ ಪತ್ನಿ ಸಮಿಯಾ ಗೋಸ್ವಾಮಿ ಮೇಲೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಗುರುವಾರ ನಸುಕಿನ ಜಾವ ಮುಂಬೈಯಲ್ಲಿ ನಡೆದಿದೆ.

ಅರ್ನಬ್ ಗೋಸ್ವಾಮಿ ಮೇಲೆ ದಾಳಿ: ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ತೀವ್ರ ಖಂಡನೆ
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಪ್ರಕರಣವನ್ನು ಕೇಂದ್ರದ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಪ್ರಕಾಶ್ ಜವಡೇಕರ್ ಅವರು ಗುರುವಾರ ತೀವ್ರವಾಗಿ ಖಂಡಿಸಿದ್ದಾರೆ.

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ, ಪತ್ನಿ ಮೇಲೆ ದಾಳಿ: ಇಬ್ಬರ ಬಂಧನ
ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹಾಗೂ ಅವರ ಪತ್ನಿ ಮೇಲೆ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಸೋನಿಯಾ ವಿರುದ್ಧ ಆರೋಪ: ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್!
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

