ರಾಜ್ಯನಮ್ಮ ಕ್ಲಿನಿಕ್ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹ ತಪಾಸಣೆ: ಡಾ. ಕೆ.ಸುಧಾಕರ್
ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ʼನಮ್ಮ ಕ್ಲಿನಿಕ್ʼ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.