arrived

ಬೆಳಗಾವಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮನ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ!
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಳಗಾವಿಗೆ ಮಂಗಳವಾರ ಬೆಳಿಗ್ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪಕ್ಷದ ನಾಯಕರು ಆತ್ಮೀಯ ಸ್ವಾಗತ ನೀಡಿದರು.

ತವರಿಗೆ ಮರಳಿದ ವಿಶ್ವಕಪ್ ವಿಜೇತ ಭಾರತದ ಅಂಡರ್-19 ಮಹಿಳಾ ತಂಡ, ಅದ್ದೂರಿ ಸ್ವಾಗತ
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಆಗಮಿಸಿದ 2023ರ ಐಸಿಸಿ ಅಂಡರ್ 19 ಮಹಿಳಾ ಟಿ-20 ವಿಶ್ವಕಪ್ ವಿಜೇತ ಭಾರತೀಯ ಆಟಗಾರ್ತಿಯರನ್ನು ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಳ್ಳಲಾಯಿತು.

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023: ಬೆಂಗಳೂರಿಗೆ ಬಂದಿಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಲಹಂಕದ ವಾಯುನೆಲೆಯಲ್ಲಿ ನಾಳೆಯಿಂದ ಐದು ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು.

ಹುಬ್ಬಳ್ಳಿಗೆ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಆಗಮನ; ಶನಿವಾರ ರೋಡ್ ಶೋ, ಸಾರ್ವಜನಿಕ ಸಭೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಬಿಎಸ್ ಎಫ್ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತಿತರರು ಆತ್ಮೀಯವಾಗಿ ಬರಮಾಡಿಕೊಂಡರು.

ಪುನೀತ್ ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್
ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಇಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಡುವೆ ದೆಹಲಿಗೆ ಸಚಿನ್ ಪೈಲಟ್ ಆಗಮನ
ರಾಜಸ್ಥಾನ ಕಾಂಗ್ರೆಸ್ ನಲ್ಲಿ ತೀವ್ರ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿರುವಂತೆಯೇ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು. ಆದಾಗ್ಯೂ, ಇಲ್ಲಿಯವರೆಗೂ ಯಾವುದೇ ಸಭೆ ನಿಗದಿಯಾಗಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ಟಿ-20 ವಿಶ್ವಕಪ್ ಫೈನಲ್ ನಲ್ಲಿ ಸೋತ ನಂತರ ಜೈಪುರಕ್ಕೆ ಬಂದಿಳಿದ ನ್ಯೂಜಿಲೆಂಡ್ ತಂಡ
ದುಬೈನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋತ ನಂತರ ನ್ಯೂಜಿಲೆಂಡ್ ತಂಡ ಚಾರ್ಟರ್ ವಿಮಾನವೊಂದರಲ್ಲಿ ರಾಜಸ್ಥಾನದ ಜೈಪುರಕ್ಕೆ ಇಂದು ಬಂದಿಳಿತು.

ನೂತನ ಸಿಎಂ ಬೊಮ್ಮಾಯಿ ಡೈನಾಮಿಕ್: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಡೈನಾಮಿಕ್ ಎಂದಿದ್ದಾರೆ. ನಿರ್ಲಕ್ಷ್ಯ ದಿಂದ ಕೆರೆಗಳು ಒತ್ತುವರಿಯಾಗಿ ಮರೆಯಾಗಿವೆ, ಹೊಸ ಮುಖ್ಯಮಂತ್ರಿ ಡೈನಾಮಿಕ್ ಆಗಿದ್ದು, ಅವರು ಕೆರೆಗಳ ಸಂರಕ್ಷಣೆಗೆ ಸಕಾಲದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆಂದು ವೆಂಕಯ್ಯ ನಾಯ್ಡು ಭರವಸೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ತಲುಪಿದ 29ನೇ ಆಕ್ಸಿಜನ್ ಎಕ್ಸ್ ಪ್ರೆಸ್: 126.7 ಮೆಟ್ರಿಕ್ ಟನ್ ಪ್ರಾಣವಾಯು ಆಗಮನ
29ನೇ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಂದು ಬೆಂಗಳೂರಿಗೆ ಆಗಮಿಸಿದೆ. 126.7 ಮೆಟ್ರಿಕ್ ಟನ್ ವೈದ್ಯಕೀಯ ಲಿಕ್ವಿಡ್ ಆಕ್ಸಿಜನ್ ಹೊತ್ತ ಈ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನ ವೈಟ್ ಫೀಲ್ಡ್ ಕಂಟೈನರ್ ಡಿಪೋ ತಲುಪಿರುವುದಾಗಿ ಪ್ರಸಾರ ಭಾರತಿ ಟ್ವೀಟ್ ಮಾಡಿದೆ.

