ಸಿನಿಮಾ ಸುದ್ದಿಧನುಷ್ ನಟನೆಯ ಬಹು ನಿರೀಕ್ಷಿತ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ!
ಅರುಣ್ ಮಾಥೇಶ್ವರನ್ ನಿರ್ದೇಶನದ ನಟ ಧನುಷ್ ಅವರ ಬಹು ನಿರೀಕ್ಷಿತ ಚಿತ್ರ 'ಕ್ಯಾಪ್ಟನ್ ಮಿಲ್ಲರ್' ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಡಿಸೆಂಬರ್ 15 ರಂದು ಚಿತ್ರ ಬಿಡುಗಡೆಗೆ ಯೋಜಿಸಲಾಗಿತ್ತು. ಇದೀಗ 2024ರ ಸಂಕ್ರಾಂತಿ ವೇಳೆಗೆ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ.