arun singh

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 120ಕ್ಕಿಂತ ಹೆಚ್ಚು ಸೀಟುಗಳನ್ನು ಗೆಲ್ಲುತ್ತೇವೆ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಎರಡು ವರ್ಷವೂ ಬಾಕಿ ಇಲ್ಲ. ಈ ಸಂದರ್ಭದಲ್ಲಿ ಪ್ರಮುಖ ಪಕ್ಷಗಳು ತಮ್ಮದೇ ರೀತಿಯಲ್ಲಿ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿವೆ. ಮುಂದಿನ ಚುನಾವಣೆಯಲ್ಲಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಬಿಜೆಪಿಯಿದೆ.

ಬಿಜೆಪಿ ಅತಿದೊಡ್ಡ ಪಕ್ಷ, ಜೆಡಿಎಸ್ ಜೊತೆ ಮೈತ್ರಿ ಇಲ್ಲ; ಯಡಿಯೂರಪ್ಪನವರ ಅನುಭವಗಳನ್ನು ಪಕ್ಷ ಬಳಸಿಕೊಳ್ಳುತ್ತದೆ: ಅರುಣ್ ಸಿಂಗ್
ಬಿಜೆಪಿ ಅತಿದೊಡ್ಡ ರಾಜಕೀಯ ಪಕ್ಷವಾಗಿದ್ದು ಜೆಡಿಎಸ್ ಹಾಗೂ ಬೇರಾವ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ನಂತರ ರಾಜ್ಯಕ್ಕೆ ಅರುಣ್ ಸಿಂಗ್: ಇಂದಿನಿಂದ ನಾಲ್ಕು ದಿನಗಳ ಪ್ರವಾಸ
ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್‌ಸಿಂಗ್ ರಾಜ್ಯದ ನಾಲ್ಕು ದಿನಗಳ ಪ್ರವಾಸಕ್ಕಾಗಿ ಸೋಮವಾರ ನಗರಕ್ಕೆ ಆಗಮಿಸಲಿದ್ದು ನಾಲ್ಕು ದಿನಗಳ ರಾಜ್ಯಪ್ರವಾಸ ಕೈಗೊಳ್ಳಲಿದ್ದಾರೆ.

ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ: ಕುತೂಹಲ ಮೂಡಿಸಿದ ಸಚಿವ ಯೋಗೇಶ್ವರ್ ಹೇಳಿಕೆ!
ಈಗಾಗಲೇ ಪರೀಕ್ಷೆ ಬರೆಯಲಾಗಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಅವರು ನೀಡಿರುವ ಹೇಳಿದ್ದಾರೆ.

ಭಿನ್ನಮತದ ಬೇಗುದಿಯ ನಂತರ ಮೊದಲ ಸಚಿವ ಸಂಪುಟ ಸಭೆ: ಅಶಿಸ್ತಿನಿಂದ ವರ್ತಿಸಿದ ಸಚಿವರಿಗೆ ಕೊಕ್?
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಭೇಟಿ ನಂತರ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಮೊದಲ ಸಚಿವ ಸಂಪುಟ ಸಭೆ ನಡೆಯಲಿದೆ.

ಬಿಜೆಪಿ ನಾಯಕರ ಒಳಜಗಳ ಈಗ ಬೀದಿರಂಪಾಟ: ಅರುಣ್ ಸಿಂಗ್ ಸೂಚನೆ ಧಿಕ್ಕರಿಸಿ ಬಹಿರಂಗ ವಾಗ್ದಾಳಿ
ರಾಜ್ಯ ಬಿಜೆಪಿ ಘಟಕದಲ್ಲಿರುವ ಭಿನ್ನಮತವನ್ನು ಶಮನ ಮಾಡಲು ಬಂದಿರುವ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ಜೊತೆ ಶಾಸಕರು ಮುಕ್ತವಾಗಿ ತಮ್ಮ ಸಮಸ್ಯೆ, ಅಭಿಪ್ರಾಯಗಳನ್ನು ಹೇಳಿಕೊಳ್ಳಲು ನಿನ್ನೆ ಅವಕಾಶ ನೀಡಲಾಗಿತ್ತು.

ಸರ್ಕಾರ, ನಾಯಕತ್ವದ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವವರಿಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎಚ್ಚರಿಕೆ
ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸರ್ಕಾರ, ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಪಂಚಮಸಾಲಿ ಲಿಂಗಾಯತ ಸಮುದಾಯದವರೇ ಸಿಎಂ ಆಗಲಿ, ಯಡಿಯೂರಪ್ಪನವರ ಬದಲಾವಣೆ ಆಗಬೇಕು: ಹೆಚ್. ವಿಶ್ವನಾಥ್
ಸಿಎಂ ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಅವರಿಗೆ ಮೊದಲಿನಂತೆ ಕೆಲಸ ಮಾಡಲು ಆಗುತ್ತಿಲ್ಲ, ಹೀಗಾಗಿ ತಮ್ಮ ಪರಿಸ್ಥಿತಿ, ವಯಸ್ಸಿನ ಇತಿಮಿತಿ, ಆರೋಗ್ಯವನ್ನು ಮನಗಂಡು ಬೇರೆಯವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಮತ್ತೊಮ್ಮೆ ಅಪಸ್ವರ ಎತ್ತಿದ್ದಾರೆ.

ಸೂಟು-ಬೂಟು ಹಾಕಿಕೊಂಡ ಒಂದಿಬ್ಬರು ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ: ಎಂ.ಪಿ.ರೇಣುಕಾಚಾರ್ಯ
ಇನ್ನು ಎರಡು ವರ್ಷಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಸಿಎಂ ನಾಯಕತ್ವ ಬದಲಾವಣೆಯಾಗಬಾರದು, ಮುಖ್ಯಮಂತ್ರಿ ಬದಲಾವಣೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ, ಈ ಸಂದರ್ಭದಲ್ಲಿ ಸಿಎಂ ಬದಲಾವಣೆಯ ಚರ್ಚೆಯೇ ಅಪ್ರಸ್ತುತ ಎಂದು ಶಾಸಕ ಎಂ ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.

